ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ಮಂಡಿಸಿದ “ಕರಾವಳಿ ಕರ್ನಾಟಕದಲ್ಲಿರುವ ಗ್ರಾಮೀಣ ಮಹಿಳಾ ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕೊಯಮುತ್ತೂರಿನ ಭಾರತೀಯಾರ್ ವಿಶ್ವ ವಿದ್ಯಾನಿಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಇವರ ಸಂಶೋಧನೆಗೆ ಉಡುಪಿ ಜಿಲ್ಲೆಯ ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ನಿವೃತ್ತ ವಾಣಿಜ್ಯ ಪ್ರಾಧ್ಯಾಪಕರಾದ ಡಾ|. ಎಸ್. ಗಣೇಶ ಭಟ್ ಮಾರ್ಗದರ್ಶನ ನೀಡಿರುತ್ತಾರೆ.











