ಲಯನ್ಸ್ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಪ್ರಭು ಇವರಿಂದ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

0
377

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಇಲ್ಲಿನ ಉಡುಪಿಯ ಲಯನ್ಸ್ ಕ್ಲಬ್‍ನ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಪ್ರಭು ತಮ್ಮ ಲಯನ್ಸ್ ಯೋಜನೆಯಡಿ ಸಾಕಷ್ಟು ಸಂಸ್ಥೆ ದೇಗುಲ, ಶಿಕ್ಷಣ ಸಂಸ್ಥೆಗಳಿಗೆ ಕೊಡುಗೆಗಳನ್ನು ನೀಡುತ್ತಿದ್ದು ಮಂಗಳವಾರ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಸಮ್ಮುಖದಲ್ಲಿ ಹಸ್ತಾಂತರಿಸಿದರು.

Click Here

ಈ ಸಂದರ್ಭದಲ್ಲಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರನ್ನು ದೇಗುಲದ ವತಿಯಿಂದ ಗೌರವಿಸಲಾಯಿತು.

ಈ ವೇಳೆ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸುರೇಶ್ ಪ್ರಭು, ಉದ್ಯಮಿ ಉಮೇಶ್ ಪ್ರಭು ಕೋಟ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಕೋಟ ಗ್ರಾಮಪಂಚಾಯತ್ ಸದಸ್ಯ ಚಂದ್ರ ಆಚಾರ್, ಕೋಟ ಅಮೃತೇಶ್ಚರಿ ದೇಗುಲದ ಟ್ರಸ್ಟಿ ಗಣೇಶ್ ನೆಲ್ಲಿಬೆಟ್ಟು, ಕೋಟ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರಾದ ಜಿ.ಎಸ್ ಆನಂದ್ ದೇವಾಡಿಗ, ಗಣೇಶ್ ಪೂಜಾರಿ, ಚಂದ್ರ ಪೂಜಾರಿ, ಜಗನಾಥ ಕಾಂಚನ್, ಗಣೇಶ್ ಕುಂದರ್, ದೇವೇಂದ್ರ ಗಾಣಿಗ, ಗಿರೀಶ್ ದೇವಾಡಿಗ, ರಂಜಿತ್ ಬಾರಿಕೆರೆ ಮತ್ತಿತರರು ಇದ್ದರು.

Click Here

LEAVE A REPLY

Please enter your comment!
Please enter your name here