ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್, ಉಡುಪಿ ಹಾಗೂ ಪಂಚವರ್ಣ ಯುವಕ ಮಂಡಲ (ರಿ.) ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಜಂಟಿ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಕೋಡಿ ಇವರ ಸಹಯೋಗದೊಂದಿಗೆ ಏಕ್ ಪೇಡ್ ಮಾ ಕೆ ನಾಮ್ ಅಭಿಯಾನ ಕಾರ್ಯಕ್ರಮ ಮಂಗಳವಾರ ಕೋಡಿ ಗ್ರಾಮಪಂಚಾಯತ್ ನಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಗಿಡ ನಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ, ಉಪಾಧ್ಯಕ್ಷ ಪ್ರಸಾದ್, ಗೀತಾನಂದ ಟ್ರಸ್ಟ್ ನ ಮುಖ್ಯಸ್ಥ ಆನಂದ್ ಸಿ. ಕುಂದರ್, ಉಡುಪಿ ನೆಹರು ಕೇಂದ್ರದ ಉಲ್ಲಾಸ್, ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮತ್ತಿತರರು ಇದ್ದರು.











