ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ವಂಡ್ಸೆ ವಲಯ ಇದರ ಸಹಭಾಗಿತ್ವದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಕೆಪಿಎಸ್ ವಂಡ್ಸೆ-ನೆಂಪು ಇಲ್ಲಿನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಸುಬ್ರಮಣ್ಯ ಶೆಟ್ಟಿ ಭಾಗವಹಿಸಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆಯ ಡಾ.ಆತುಲ್ ಕುಮಾರ್ ಶೆಟ್ಟಿ ವಹಿಸಿದ್ದರು.
ಜನಜಾಗೃತಿ ವೇದಿಕೆಯ ಸದಸ್ಯರಾದ ವಿ.ಕೆ ಶಿವರಾಮ್ ಶೆಟ್ಟಿ, ವೆಂಕಟೇಶ್ ಶೆಟ್ಟಿ ತೆಂಕೊಡಿಗೆ, ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣರಾಜ ಭಟ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಪ್ರೇಮಾ, ಒಕ್ಕೂಟದ ಅಧ್ಯಕ್ಷರಾದ ಚಂದ್ರವತಿ ಶೆಟ್ಟಿ, ಸೇವಾಪ್ರತಿನಿಧಿ ಯಶೋಧ, ಮಮತಾ ಉಪಸ್ಥಿತರಿದ್ದರು.











