ವಂಡ್ಸೆಯಲ್ಲಿ ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಉದ್ಘಾಟನೆ

0
521

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ, ಆ.31: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆಯುವ ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಆ.31 ಭಾನುವಾರ, ವಂಡ್ಸೆಯ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಡಾ.ಅತುಲ್ ಕುಮಾರ್ ಶೆಟ್ಟಿ ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಸಾರ್ವಜನಿಕ ಉಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿದೆ. ಶಿಕ್ಷಣ, ಆರೋಗ್ಯ, ಸಾಮಾಜಿಕ, ಕೃಷಿ ಕ್ಷೇತ್ರಕ್ಕೆ ಒತ್ತು ನೀಡುತ್ತಿದೆ. ಸಾರ್ವಜನಿಕರು ಇಂಥಹ ಉಪಯೂಕ್ತ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ನಿರಾಮಯ ಸೊಸೈಟಿ ವಂಡ್ಸೆ ಇದರ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು ಮಾತನಾಡಿ, ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ಆರೋಗ್ಯದ ದೃಷ್ಟಿಯಿಂದ ನಿರಾಮಯ ಸೊಸೈಟಿ, (ಪಾಲಿಯೇಟಿವ್ ಕೇರ್ ಯೂನಿಟ್) ಸೆ.1ರಿಂದ ವಂಡ್ಸೆ ಕ್ಲಸ್ಟರ್‍ನಲ್ಲಿ ಆರಂಭವಾಗಲಿದೆ ಎಂದರು.

Click Here

ಧ.ಗ್ರಾ ಯೋಜನೆಯ ಕೇಂದ್ರ ಸಮಿತಿ ಉಪಾಧ್ಯಕ್ಷ ಶಶಿಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ವಂಡ್ಸೆ ವಲಯ ಒಕ್ಕೂಟದ ಅಧ್ಯಕ್ಷೆ ಚಂದ್ರಾವತಿ, ಜನಜಾಗೃತಿ ವೇದಿಕೆ ಸದಸ್ಯರಾದ ವೆಂಕಟೇಶ್ ಶೆಟ್ಟಿ ತೆಂಕೊಡಿಗೆ, ವಿ.ಕೆ ಶಿವರಾಮ ಶೆಟ್ಟಿ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿನ ಸಹಶಿಕ್ಷಕರಾದ ಸದಾಶಿವ ಕೆಂಚನೂರು, ಶ್ರೀ ಕ್ಷೇ.ಧ,ಗ್ರಾ, ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ ಶೆಟ್ಟಿ ಹೆಚ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ.ಮಾನಸ, ಸಂಪರ್ಕಾಧಿಕಾರಿ ಮೋಹನದಾಸ್ ಉಪಸ್ಥಿತರಿದ್ದರು.

ತಾಲೂಕು ಮಹಿಳಾ ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೊಡಪದವು ಸ್ವಾಗತಿಸಿದರು. ವಂಡ್ಸೆ ವಲಯ ಮೇಲ್ವಿಚಾರಕ ಚಂದ್ರ ಮಧುವನ ಕಾರ್ಯಕ್ರಮ ನಿರ್ವಹಿಸಿದರು. ಸ್ಥಳೀಯ ಸೇವಾಪ್ರತಿನಿಧಿ ಮಮತಾ ವಂದಿಸಿದರು.

Click Here

LEAVE A REPLY

Please enter your comment!
Please enter your name here