ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್(ರಿ), ಇದರ 2025-27 ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜು ಜಿ. ನಾಯರ್ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಎಂ. ಚಂದ್ರಶೇಖರ್ ಹೆಗ್ಡೆ, ಗೌರವ ಕಾರ್ಯದರ್ಶಿಗಳಾಗಿ ಗ್ರೆಗರಿ ಡಿ’ಸಿಲ್ವಾ, ಉಪಾಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಹೆಗ್ಗುಂಜಿ, ಪ್ರಧಾನ ಕಾರ್ಯದರ್ಶಿಗಳಾಗಿ ಮೇಜರ್ ಜಿ. ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿಗಳಾಗಿ ವಿಕ್ರಂ ಪ್ರಭು, ಸಂಘಟನಾ ಕಾರ್ಯದರ್ಶಿಗಳಾಗಿ ದೇವದಾಸ್ ಶೆಟ್ಟಿ, ಸಹ ಕಾರ್ಯದರ್ಶಿಗಳಾಗಿ ಶ್ರೀಧರ್ ವಿ. ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್ ಕುಂದರ್, ಎಚ್ ಸುಭಾಷ್ ಚಂದ್ರ ಶೆಟ್ಟಿ, ಡಾ. ಎಸ್. ಮಹೇಶ್ ಶೆಟ್ಟಿ, ಬಿರ್ತಿ ರಾಜೇಶ್ ಶೆಟ್ಟಿ, ಅಬ್ದುಲ್ ಸಲಾಂ, ಡಾ. ಕಿರಣ್ ಶೆಟ್ಟಿ, ರೋಹಿತ್ ಶೆಟ್ಟಿ ಮತ್ತು ಜೇಮ್ಸ್ ಒಲಿವರ್, ಲೆಕ್ಕಪರಿಶೋಧಕರಾಗಿ ಸಿಎ ಪದ್ಮನಾಭ ಕಾಂಚನ್ ರವರು ಆಯ್ಕೆಯಾಗಿದ್ದಾರೆ.











