ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡ ನಿರ್ಮಾಣವಾಗಿದ್ದು ಜನವರಿ 7 ಶುಕ್ರವಾರ ಪೂರ್ವಾಹ್ನ 10-30ಕ್ಕೆ ಉದ್ಘಾಟನೆಗೊಳ್ಳಲಿದೆ. ನೂತನ ಕಟ್ಟಡವನ್ನು ದ.ಕ ಜಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಹೇಳಿದರು.
Video:-


ಅವರು ಸಂಘದ ಪ್ರಧಾನ ಕಛೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.
ಕ್ಷೇತ್ರದ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರು, ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಬೈಂದೂರು ಅಧ್ಯಕ್ಷರಾದ ಕೆ.ಗೋಪಾಲ ಪೂಜಾರಿ ಗೋದಾಮು ಉದ್ಘಾಟಿಸಲಿದ್ದಾರೆ. ನಿವೃತ್ತ ಉಪನ್ಯಾಸಕ ಎಸ್.ಜನಾರ್ದನ ಮರವಂತೆ ಶುಭಾಶಂಸನೆಗೈಯ್ಯಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮರವಂತೆ ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ, ಉಡುಪಿ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ ನಾಯಕ್, ಕುಂದಾಪುರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಮಹೇಶ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಭಾಗವಹಿಸಲಿದ್ದಾರೆ ಎಂದರು.
ಅಪರಾಹ್ನ 1 ಗಂಟೆಗೆ ಅಂತರಾಷ್ಟ್ರೀಯ ಯೋಗಪಟು, ಚಲನಚಿತ್ರ ಬಾಲ ನಟಿ ಧನ್ವಿ ಮರವಂತೆ ಇವರಿಂದ ಯೋಗ ಮತ್ತು ನೃತ್ಯ ಪ್ರದರ್ಶನ, ಗಾಯಕ ಗಣೇಶ್ ಗಂಗೊಳ್ಳಿ ತಂಡದವರಿಂದ ಸುಗಮ ಸಂಗೀತ, ಅಪರಾಹ್ನ 2-30ಕ್ಕೆ ಯಕ್ಷರಾಘವ ಜನ್ಸಾಲೆ ಪ್ರತಿಷ್ಠಾನ ಸಿದ್ಧಾಪುರ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಕಂಸ ದಿಗ್ವಿಜಯ-ಕಂಸ ವಧೆ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಎಂ.ಚಂದ್ರಶೀಲ ಶೆಟ್ಟಿ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ, ನಾಮ ನಿರ್ದೇಶಿತ ನಿರ್ದೇಶಕ ಎಂ.ವಿನಾಯಕ ರಾವ್ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.











