ಕ್ರಿಕೆಟ್: ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0
1045

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ನೇತೃತ್ವದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಹುಡುಗರ ತಂಡವು ದ್ವೀತಿಯ ಸ್ಥಾನ ಪಡೆಯಿತು.

Click Here

ತಂಡದ ಐವರು ವಿದ್ಯಾರ್ಥಿಗಳಾದ ಆಯುಷ್ ಶೆಟ್ಟಿ, ಅನುಜ್ ಅಂಬ್ಲಿ, ಕನಿಷ್ಕ್, ಸನ್ವಿತ್ ಮತ್ತು ಅಭಿಷ್ ಜಿಲ್ಲಾ ಮಟ್ಟದ ಕ್ರಿಕೆಟ್ ತಂಡಕ್ಕೆ ಆಯ್ಕೆ ಆಗಿದ್ದಾರೆ. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಫಲಕ ಪದಕ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಹಾಗೂ ಸೂರ್ಯ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದರು.

Click Here

LEAVE A REPLY

Please enter your comment!
Please enter your name here