ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಅಪೆಕ್ಸ್ ಬ್ಯಾಂಕಿನ ರಾಜ್ಯ ಮಟ್ಟದ “ಅತ್ಯುತ್ತಮ ಸಾಧನಾ ಪ್ರಶಸ್ತಿ”

0
430

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕೋಟ ಸಹಕಾರಿ ವ್ಯವಸಾಯಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು 2023-24ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ರಾಜ್ಯ ಮಟ್ಟದ ಅತ್ಯುತ್ತಮ ಸಾಧನಾ ಪ್ರಶಸ್ತಿ 2023-24 ನೀಡಿದ ಹಿನ್ನಲೆಯಲ್ಲಿ ಆ.30.ರಂದು ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನಿಸಿದೆ.

Click Here

ಪ್ರಶಸ್ತಿಯನ್ನು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ| ಕೃಷ್ಣ ಕಾಂಚನ್ ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಇವರಿಗೆ ಬ್ಯಾಂಕಿನ ಪರವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಚ್. ನಾಗರಾಜ ಹಂದೆ, ನಿಕಟಪೂರ್ವ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಮತ್ತು ಮಾಜಿ ನಿರ್ದೇಶಕರಾದ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here