ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ನೇತಾಜಿ ಸರಕಾರಿ ಪ್ರೌಢಶಾಲೆ ಕಾಳಾವರದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕಾಳಾವರದ ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಹೆಗ್ಡೆ ಶಾನಾಡಿಯವರು ಪಂದ್ಯಾಟವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪಠ್ಯ ವಿಷಯ ಜೊತೆಗೆ ಕ್ರೀಡಾ ಚಟುವಟಿಕೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಅತಿ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಳಾವರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮಂಜುನಾಥ ಶೆಟ್ಟಿಗಾರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಾಳಾವರ ಗ್ರಾಮ ಪಂಚಾಯಿತಿಯ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ನೇತಾಜಿ ಯುವಕ ಮಂಡಲದ ಅಧ್ಯಕ್ಷರಾದ ಭರತ್ ಕುಮಾರ್ ಶೆಟ್ಟಿ ,ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸತೀಶ್ ಜೋಗಿ, ತಾಲೂಕು ಗ್ರೇಡ್ – 1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಉದಯ್ ಮಡಿವಾಳ್, ತಾಲೂಕು ದೈಹಿಕ ಶಿಕ್ಷಕರ ಮಾತೃ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕೋಟೇಶ್ವರ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಮುಸರತ್ ಜಹಾಂನ್ ಅಕ್ಬರ್ ಎಂ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ ಜಿ ಪ್ರಸ್ತಾವನೆಗೈದರು. ದೈಹಿಕ ಶಿಕ್ಷಣ ಶಿಕ್ಷಕರಾದ ರಾಮ ಕೆ ಕೆ ವಂದನಾರ್ಪಣೆಗೈದರು. ಕಾರ್ಯಕ್ರಮವನ್ನು ಕನ್ನಡ ಅಧ್ಯಾಪಕರಾದ ರವಿರಾಜ ಶೆಟ್ಟಿ ನಿರೂಪಿಸಿದರು.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ
17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ
14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ











