ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಕೋಟದ ಗಿಳಿಯಾರಿನ ಬೋಜ ಪೂಜಾರಿಗೆ ಕೃಷಿ ಕ್ಷೇತ್ರದಲ್ಲಿನ ಸಾಧನೆಗಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ವತಿಯಿಂದ ಗೌರವಿಸಲಾಯಿತು.
ಭಾನುವಾರ ಕೋಟದ ವಿವೇಕ ವಿದ್ಯಾಸಂಘದ ಸಭಾಂಗಣದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಕೋಟ ಹೋಬಳಿಯ ಅತ್ಯುತ್ತಮ ಯುವ ಸಾಧಕ ಕೃಷಿಕ ಸನ್ಮಾನ ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷರಾದ ಡಾ.ಕೃಷ್ಣ ಕಾಂಚನ್ ಅಧ್ಯಕ್ಷತೆಯಲ್ಲಿ ಕೋಟ ಅಮೃತೇಶ್ವರೀ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್, ಸಂಘದ ಉಪಾಧ್ಯಕ್ಷ ನಾಗರಾಜ್ ಹಂದೆ, ನಿರ್ದೇಶಕರುಗಳು, ಸಿಇಒ ಮತ್ತಿತರರು ಉಪಸ್ಥಿತರಿದ್ದರು.











