ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇಲ್ಲಿಗೆ ಭೇಟಿ ನೀಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಮ್.ಸುಕುಮಾರ ಶೆಟ್ಟಿಯವರು ಶಾಸಕರ ನಿಧಿಯಿಂದ ಐದು ಲಕ್ಷ ರೂಪಾಯಿ ಬಿಡುಗಡೆಗೊಳಿಸಿದರು.

ಇಲ್ಲಿ ಸುಮಾರು 39 ವಿಶೇಷ ಮಕ್ಕಳು ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ವಿಶೇಷ ಮಕ್ಕಳೊಂದಿಗೆ ಕೆಲಹೊತ್ತು ಕಳೆದ ಶಾಸಕರು ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಮುಖರು ಶಾಸಕರನ್ನು ಸ್ವಾಗತಿಸಿದರು. ಶಿಕ್ಷಕವೃಂದದವರು ಉಪಸ್ಥಿತರಿದ್ದರು.










