ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇತ್ತೀಚಿಗೆ ಭರತನಾಟ್ಯದಲ್ಲಿ ವಿಶ್ವದಾಖಲೆ ಬರೆದ ಕಲಾವಿದೆ ದಿಕ್ಷಾ ಬ್ರಹ್ಮಾವರ ಕೋಟದ ಅಮೃತೇಶ್ವರೀ ದೇಗುಲಕ್ಕೆ ಶನಿವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಸದಸ್ಯರಾದ ಸುಭಾಷ್ ಶೆಟ್ಟಿ ಹಾಗೂ ಗಣೇಶ್ ನೆಲ್ಲಿಬೆಟ್ಟು ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಿದರು.
ದೇಗುಲದ ಅರ್ಚಕರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.
ಈ ಸಂದರ್ಭದಲ್ಲಿ ದೇಗುಲದ ಪ್ರಧಾನ ಅರ್ಚಕರಾದ ಲಕ್ಷ್ಮಣ್ ಜೋಗಿ, ಅಶ್ವಥ್ ಜೋಗಿ, ಮಹಾಬಲ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಮತ್ತಿತರರು ಇದ್ದರು.











