ಕ್ರಿಕೆಟ್: ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

0
117

Click Here

Click Here

ಕುಂದಾಪುರ ಮಿರರ್ ‌ಸುದ್ದಿ…

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ನೇತೃತ್ವದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅನುಜ್ ಈಶ್ವರ ಅಂಬ್ಲಿ ರಾಜ್ಯಮಟ್ಟದ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುತ್ತಾನೆ. ಈತ ಬಾಗಲಕೋಟೆಯ ಬನಹಟ್ಟಿಯ ಈಶ್ವರ ಹಾಗೂ ಅಶ್ವಿನಿ ದಂಪತಿಯ ಪುತ್ರ.

Click Here

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಹಾಗೂ ಸೂರ್ಯ ತರಬೇತಿ ನೀಡಿದ್ದರು.

Click Here

LEAVE A REPLY

Please enter your comment!
Please enter your name here