ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ವಿಶ್ವಕರ್ಮ ಸಮುದಾಯ ಎಲ್ಲಾ ಸಮುದಾಯಗಳಿಂದ ಅತಿ ಸಣ್ಣ ಸಮುದಾಯ ಆದರೆ ಆ ಸಮುದಾಯ ಎಲ್ಲರಿಗೂ ಮಾದರಿಯಾಗಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.
ಮಂಗಳವಾರ ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗದ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವ ಸಭಾಕಾರ್ಯಕ್ರಮದಲ್ಲಿ ಮಾತನಾಡಿ ಅವರ ಕಾರ್ಯ ವೈಖರಿ, ವಿದ್ವತ್ ಬಹು ಎತ್ತರಕ್ಕಿದೆ. ಇಂದು ಜಾತಿ ಆಧಾರಿತ ವೃತ್ತಿ ಕುಸಿಯುತ್ತಿದೆ ಆಧುನಿಕತೆಯ ಮೂಲಕ ಬೇರೆ ಬೇರೆ ಕ್ಷೇತ್ರಗಳನ್ನು ಸಮುದಾಯದ ಆಕರ್ಷಿಸುತ್ತಿದೆ. ಈ ಹಿನ್ನಲ್ಲೆಯಲ್ಲಿ ಕೇಂದ್ರ ಸರಕಾರ ಮೂಲ ವೃತ್ತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶ್ವಕರ್ಮ ಯೋಜನೆಗಯನ್ನು ಜಾರಿಗೊಳಿಸಿ ಸಾಕಷ್ಟು ವೃತ್ತಿನಿರತರಿಗೆ ಅನುಕೂಲಕ ವಾತಾವರ ಸೃಷ್ಠಿಸಿದ್ದಾರೆ, ಎಂದರಲ್ಲದೆ ವಿಶ್ವಕರ್ಮ ಯಜ್ಞ ಮಹೋತ್ಸವ ಧಾರ್ಮಿಕ ಪರಂಪರೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದರು.
ಸಭೆಯಲ್ಲಿ ಒಎನ್ ಜಿಸಿ ಮುಂಬೈ ಇದರ ನಿವೃತ್ತ ಚೀಫ್ ಜನರಲ್ ಮ್ಯಾನೇಜರ್ ಬನ್ನಾಡಿ ನಾರಾಯಣ ಆಚಾರ್ ಹಾಗೂ ಗಾಯಕ ವಿದ್ವತ್ ಯಶವಂತ್ ಎಂ. ಜಿ. ಇವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿತು.
ವೃತ್ತಿ ಹಿರಿಯ ಸಾಧಕರಾದ ಗುಂಡ್ಮಿ ನಾರಾಯಣ ಆಚಾರ್ ದಂಪತಿಗಳು, ಕಾರ್ಕಡ ರಂಗಯ್ಯ ಆಚಾರ್ ದಂಪತಿಗಳನ್ನು ಸನ್ಮಾನಿಸಲಾಯಿತು.
ಸಮುದಾಯದ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ನೀಡಲಾಯಿತು.
ಇದೇ ಸಂದರ್ಭದಲ್ಲಿ ದಿ.ಪದ್ದು ಆಚಾರ್ ಸ್ಮರಣಾರ್ಥ ಆರೋಗ್ಯ ನಿಧಿಯನ್ನು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಅಧ್ಯಕ್ಷ ಎಂ ಸುಬ್ರಾಯ ಆಚಾರ್ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್, ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ ಶೆಟ್ಟಿ, ವಿಶ್ವಜ್ಯೋತಿ ಮಹಿಳಾ ಬಳಗದ ಅಧ್ಯಕ್ಷೆ ರಮ್ಯ ರಮೇಶ್ ಆಚಾರ್ ಉಪಸ್ಥಿತರಿದ್ದರು.
ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ,ನಾಟಕ ಪ್ರದರ್ಶನಗೊಂಡಿತು.
ವಿಶ್ವಕರ್ಮ ಕಲಾವೃಂದರ ಅಧ್ಯಕ್ಷ ವೆಂಕಟೇಶ ಆಚಾರ್ ಸ್ವಾಗತಿಸಿದರು. ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘದ ಗೌರವಾಧ್ಯಕ್ಷ ಚೇಂಪಿ ಜನಾರ್ದನ ಆಚಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ದಾಮೋದರ ಶರ್ಮ ನಿರೂಪಿಸಿದರು. ಗೌರವ ಸಲಹೆಗಾರ ಐರೋಡಿ ಕೇಶವ ಆಚಾರ್ ವಂದಿಸಿದರು.











