ಕೋಟದ ಅಮೃತೇಶ್ವರೀ ದೇಗುಲದ ಶರನ್ನವರಾತ್ರಿ ಸಿದ್ಧತೆ, ಸೆ.22 ರಿಂದ ಅ.2ರ ತನಕ ಕೋಟ ದಸರಾ ಸಂಭ್ರಮ

0
61

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಪುರಾಣ ಪ್ರಸಿದ್ಧ ಸಂತಾನ ಭಾಗ್ಯ ಕರುಣಿಸುವ ಕೋಟದ ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನ ಇದರ ವಾರ್ಷಿಕ ಶರನ್ನವರಾತ್ರಿ ದಸರಾ ಉತ್ಸವಕ್ಕೆ ಸಿದ್ಧತೆಗಳು ನಡೆಯುತ್ತಿದ್ದು ದೇಗುಲದಕ್ಕೆ ವಿಶೇಷ ದೀಪಾಲಂಕಾರ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೇರಿದಂತೆ ಸೆ.22 ರಿಂದ ಮೊದಲ್ಗೊಂಡು ಅಕ್ಟೋಬರ್ 2ರವರೆಗೆ ನಡೆಯಲಿದೆ.

Click Here

ಪ್ರತಿದಿನ ಚಂಡಿಕಾ ಸಪ್ತಶತಿ ಪಾರಾಯಣ, ದುರ್ಗಾಹೋಮವು ಸಕಲ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಸಾರಥ್ಯದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಮಾರ್ಗದರ್ಶನದಲ್ಲಿ ನಡೆಯಲಿದೆ.

ಶ್ರೀದೇವಿಗೆ ನವರಾತ್ರಿಯ ಪ್ರತಿದಿನ ವಿವಿಧ ರೀತಿಯಲ್ಲಿ ಶೃಂಗರಿಸಿ ನವ ಅವತಾರಗಳ ಸೃಷ್ಠಿಗೆ ಅರ್ಚಕ ಪ್ರತಿನಿಧಿಗಳಾದ ಜೋಗಿ ಸಮಾಜ ಸಿದ್ಧತೆ ನಡೆಸಿಕೊಂಡಿದ್ದಾರೆ. ಪ್ರತಿದಿನ ಮಹಾಅನ್ನಸಂತರ್ಪಣೆ,ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಭಜನಾ ತಂಡಳಿಂದ ಭಜನಾ ಕಾರ್ಯಕ್ರಮಗಳು ನಡೆಯಲಿದೆ ಎಂದು ಶ್ರೀದೇಗುಲ ಆಡಳಿತ ಮಂಡಳಿ ತಿಳಿಸಿದೆ.

Click Here

LEAVE A REPLY

Please enter your comment!
Please enter your name here