ಅಂತಾರಾಷ್ಟ್ರೀಯ ಬೀಚ್ ಕ್ಲಿನಿಂಗ್ ಡೇ, ಕೋಟ ಮಣೂರು ಪಡುಕರೆ ಬೀಚ್ ಕ್ಲಿನಿಂಗ್ ಆಯೋಜನೆ

0
268

Click Here

Click Here

ಪ್ಲಾಸ್ಟಿಕ್ ಜೀವ ಸಂಕುಲಕ್ಕೆ ಹಾನಿ, ಸ್ವಚ್ಛತೆಯೇ ಧ್ಯೇಯವಾಗಲಿ – ಕಿರಣ್ ಕುಮಾರ್ ಕೊಡ್ಗಿ

ಕುಂದಾಪುರ: ಪ್ರಸ್ತುತ ದಿನಗಳಲ್ಲಿ ಜಲಚರ ಜೀವಿಗಳಿಗೂ ಅಲ್ಲದೆ ಮನುಕುಲದ ಮೇಲೆ ಪ್ಲಾಸ್ಟಿಕ್ ತ್ಯಾಜ್ಯ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ರೀತಿಯ ಬದುಕು ಜೀವ ಸಂಕುಲದ ಮೇಲೆ ಮಾರಕ ಖಾಯಿಲೆಗಳನ್ನು ಸೃಷ್ಠಿಸುತ್ತಿದೆ. ಇದರ ಬಗ್ಗೆ ಜಾಗೃತರಾಗುವುದು ಅತ್ಯವಶ್ಯಕ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಶನಿವಾರ ಜಿಲ್ಲಾಡಳಿತದ ನಿರ್ದೇಶನದಂತೆ ಕೋಟ ಗ್ರಾಮಪಂಚಾಯತ್, ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಆಶ್ರಿತಾ ಶಿಕ್ಷಣ ಸಮೂಹ ಸಂಸ್ಥೆಗಳು ಕೋಟ, ಹಂದಟ್ಟು ಮಹಿಳ ಬಳಗ ಕೋಟ, ಮಣೂರು ಫ್ರೆಂಡ್ಸ್ , ಜೆಸಿಐ ಕೋಟ ಸಿನಿಯರ್ ಲಿಜನ್ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಬೀಚ್ ಕ್ಲಿನಿಂಗ್ ಕಾರ್ಯಕ್ರಮದ ಅಂಗವಾಗಿ ಕೋಟದ ಮಣೂರು ಪಡುಕರೆ ಬೀಚ್ ನಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಸಮುದ್ರದ ತಟದಲ್ಲಿ ಬಾರಿ ಪ್ರಮಾಣದಲ್ಲಿ ತ್ಯಾಜ್ಯಗಳು ದಡವನ್ನು ಸೇರುತ್ತಿದೆ. ಇದಕ್ಕೆ ಕಾರಣ ಮನುಷ್ಯ ಅತಿಯಾಗಿ ಬಳಸುವ ಪ್ಲಾಸ್ಟಿಕ್ ಪರಿಸರಕ್ಕೆ ಕಂಟಕವಾಗಿ ಪರಿಣಮಿಸಿದೆ. ಈ ಹಿನ್ನಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸಿ, ಪಂಚಾಯತ್ ಜತೆ ಸ್ಥಳೀಯ ಸಂಘಟನೆಗಳು ನಿರಂತರ ಪರಿಸರ ಕಾಳಜಿ ಮಾದರಿಯಾಗಿದೆ. ಈ ದಿಸೆಯಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಿ ಎಂದು ಕರೆಕೊಟ್ಟರು.

Click Here

ಇದೇ ವೇಳೆ ಪಂಚವರ್ಣ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಪರಿಸರ ಜಾಗೃತಿ ಪ್ರತಿಜ್ಞಾವಿಧಿ ಭೋದಿಸಿದರು.

ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಸ್ವಚ್ಛತಾ ಸಂದೇಶ ನೀಡಿದರು.

ಕೋಟ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜನತಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ಶ್ರೀನಿವಾಸ ಕುಂದರ್, ಮಿಥುನ್ ಕೋಟ, ಕೋಟ ಪಂಚಾಯತ್ ಸದಸ್ಯರಾದ ಅಜಿತ್ ದೇವಾಡಿಗ, ಭುಜಂಗ ಗುರಿಕಾರ, ಜಯರಾಮ ಶೆಟ್ಟಿ, ವನೀತಾ ಶ್ರೀಧರ ಆಚಾರ್, ಶಾರದ ಕಾಂಚನ್, ಗುಲಾಬಿ ಪೂಜಾರಿ, ಶಾಂತಾ ಮಣೂರು, ಸಂತೋಷ್ ಪ್ರಭು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಮೊಗವೀರ, ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥೆ ಭವ್ಯ, ಆಶ್ರಿತಾ ಕಾಲೇಜಿನ ಪ್ರಾಂಶುಪಾಲ ಮೋಹನ್, ಜೆಸಿಐ ಸಿನಿಯರ್ ಕೋಟ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ, ಹಂದಟ್ಟು ಮಹಿಳಾ ಬಳಗದ ಸ್ಥಾಪಕಾಧ್ಯಕ್ಷೆ ಪುಷ್ಭಾ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು.

ಪಂಚಾಯತ್ ಲೆಕ್ಕಾಧಿಕಾರಿ ಶೇಖರ್ ಮರವಂತೆ ಸ್ವಾಗತಿಸಿ, ಕಾರ್ಯಕ್ರಮವನ್ನು ಪಂಚವರ್ಣದ ಸುಜಾತ ಬಾಯರಿ ನಿರೂಪಿಸಿ, ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Click Here

LEAVE A REPLY

Please enter your comment!
Please enter your name here