ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ವಾರ್ಷಿಕ ಶರನ್ನವರಾತ್ರಿ ಉತ್ಸವದ ಮೊದಲ ದಿನದ ಅಂಗವಾಗಿ ಚಂಡಿಕಾ ಸಪ್ತಸತಿ ಪಾರಾಯಣ, ದುರ್ಗಾಹೋಮ ಕಾರ್ಯಕ್ರಮಗಳು ಪ್ರಾರಂಭಗೊಂಡಿತು.
ಪ್ರತಿ ದಿನ ವಿವಿಧ ಹೋಮಾಧಿಕಾರ್ಯಕ್ರಮಗಳು ಜರಗಲಿದ್ದು ಮೊದಲ ದಿನದ ಸೇವಾಕರ್ತರಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ದಂಪತಿಗಳು ಭಾಗಿಯಾದರು.
ಧಾರ್ಮಿಕ ಕೈಂಕರ್ಯವನ್ನು ವೇ.ಮೂ ಮಧುಸೂದನ ಬಾಯರಿ ನೇತೃತ್ವದಲ್ಲಿ ಜರಗಿದವು.
ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ ಆನಂದ್ ಸಿ ಕುಂದರ್ ಸಂಸದ ಕೋಟ ಕುಟುಂಬಕ್ಕೆ ಪ್ರಸಾದ ವಿತರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ದೇಗುದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ಸುಧಾ ಎ ಪೂಜಾರಿ, ಜ್ಯೋತಿ ಡಿ.ಕಾಂಚನ್, ಶಿವ ಪೂಜಾರಿ, ರತನ್ ಐತಾಳ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿಗಳಾದ ಸುಂದರ್, ಚಂದ್ರ ಪೂಜಾರಿ, ಸುಬ್ರಾಯ ಆಚಾರ್, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಪ್ರತಿನಿಧಿಗಳು ಉಪಸ್ಥಿತರಿದ್ದರು. ಅಪರಾಹ್ನ ಮಹಾಅನ್ನಸಂತರ್ಪಣೆ, ಸಂಜೆ ಭಜನೆ, ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿತು.











