ಕಾರಂತ ಥೀಮ್ ಪಾರ್ಕ್ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

0
825

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕೋಟ:
ಜ್ಞಾನಪೀಠ ಪುರಸ್ಕೃತ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‍ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕೆರೆಯ ಮಧ್ಯದಲ್ಲಿರುವ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಂಗ ಮಂದಿರ, ಗ್ರಂಥಾಲಯ ,ಆರ್ಟ್ ಗ್ಯಾಲರಿ, ಅಂಗನವಾಡಿ ವೀಕ್ಷಿಸಿದರು.

ನಂತರ ಮಾತನಾಡಿ ಕಾರಂತರು ಸಾಹಿತ್ಯ ಲೋಕದ ಕಣ್ಮಣಿ, ನಮಗಾಗಿ ನಮ್ಮ ಮುಂದಿನ ಪೀಳಿಗೆಗೆ ಅವರು ಆದರ್ಶನೀಯರು, ಅವರ ನೆನಪು ಚಿರಸ್ಥಾಯಿಯಾಗಿರಲು ಕಾರಂತ ಥೀಮ್ ಪಾರ್ಕ್ ಸಹಕಾರಿಯಾಗಿದೆ ಎಂದರು.

Click Here

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಕಾರಂತ ಥೀಮ್ ಪಾರ್ಕ್ ಮೇಲುಸ್ತುವಾರಿ ಪೂರ್ಣಿಮಾ, ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ , ಪ್ರತಿಷ್ಠಾನ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here