ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಶಸ್ತಿಗೆ ಕೃಷ್ಣ ಕೆದಲಾಯ ಆಯ್ಕೆ
ಕುಂದಾಪುರ ಮಿರರ್ ಸುದ್ದಿ…

ಕೋಟೇಶ್ವರ :ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯ ನೂತನ ಜಿಲ್ಲಾ ಕಛೇರಿಯನ್ನು ಕೋಟೇಶ್ವರ ರಥಬೀದಿಯ ಶಾರದ ಕಲ್ಯಾಣ ಮಂಟಪದ ಕಾಂಪ್ಲೆಕ್ಸ್ ನಲ್ಲಿ ಕೋಟೇಶ್ವರ ಗೀತಾ ಎಚ್.ಎಸ್.ಎನ್ ಫೌಂಡೇಶನ್‍ನ ಕೋಶಾಧಿಕಾರಿ ರಾಮ ಅಡಿಗ ಸೋಮವಾರ ಉದ್ಘಾಟಿಸಿ, ಶುಭ ಹಾರೈಸಿದರು.
ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ರಿ. ಉಡುಪಿ ಜಿಲ್ಲಾ ಘಟಕ , ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕೊಡಮಾಡುವ 2025 -2026 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಶಸ್ತಿ, ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್ ಡಿ ಎಂ ಸಿ , ಮತ್ತು ಸರಕಾರಿ ಶಾಲೆ ಹಾಗೂ ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ, ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆಗೊಳಿಸಿ, ಮಾತನಾಡಿದ ಕೋಟೇಶ್ವರ ಗೀತಾ ಹೆಚ್.ಎಸ್.ಎನ್ ಫೌಂಡೇಶನ್‍ನ ಅಧ್ಯಕ್ಷ, ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕದ ಮಹಾಪೋಷಕ ಶಂಕರ್ ಐತಾಳ್, ಸಮಾಜದಲ್ಲಿ ವ್ಯಕ್ತಿ ಅಥವಾ ಸಂಸ್ಥೆಗೆ ಸಮಯದ ಪಾಲನೆ ಅತ್ಯಗತ್ಯ. ಕಳೆದ ಸಮಯ ಬಳಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ಸಮಯದ ಪ್ರಜ್ಞೆ ಜೀವನದಲ್ಲಿ ಪ್ರಮುಖ. ಎಸ್.ಡಿ.ಎಂ.ಸಿ ವೇದಿಕೆಯ ಸಮಾಜಸೇವೆ ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ (ರಿ) ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ವಹಿಸಿದ್ದರು.
ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಶಸ್ತಿಯನ್ನು ಹೆಸ್ಕೂತ್ತುರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೃಷ್ಣ ಕೆದಲಾಯ ಅವರಿಗೆ, ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ ಶಿಕ್ಷಕ ಪ್ರಶಸ್ತಿಯನ್ನು ಡಾ.ಕಿಶೋರ್ ಕುಮಾರ್ ಶೆಟ್ಟಿ, ಮೋಹನ್ ಕಡಬ, ತನುಜಾಕ್ಷಿ, ತಾರದೇವಿ, ವೆಂಕಟ, ರೋಶನ್ ಬೀಬಿ, ಜಯಶ್ರೀ, ರವಿ ಎಸ್.ಪೂಜಾರಿ, ಬಾಲಕೃಷ್ಣ ಶೆಟ್ಟಿ, ವಸಂತಿ ದಾಸ್. ಜಯ ಮೊಯಲಿ, ಸುಬ್ರಹ್ಮಣ್ಯ ಉಪಾಧ್ಯ ಬಿ., ಕೃಷ್ಣ ನಾಯ್ಕ್, ಆಶಾಲತಾ ಅವರಿಗೆ ಅಯ್ಕೆ ಮಾಡಲಾಯಿತು.
ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಮ್.ಸಿ. ಶಾಲೆ ಪ್ರಶಸ್ತಿಯನ್ನು ಕಾಜಾರಗುತ್ತು ಹಿರಿಯ ಪ್ರಾಥಮಿಕ ಶಾಲೆ ಉಡುಪಿ ವಲಯ, ಅಮಾಸೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ವಲಯ, ಮಣೂರು -ಪಡುಕೆರೆ ಸರಕಾರಿ ಸಂಯುಕ್ತ ಪ್ರೌಢಶಾಲೆ ಬ್ರಹ್ಮಾವರ ವಲಯ, ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ವಲಯ, ಮಾವಿನಕಟ್ಟೆ ಸರಕಾರಿ ಪ್ರಾಥಮಿಕ ಶಾಲೆ ಕುಂದಾಪುರ ವಲಯ, ಪೆರ್ವಾಜೆ ಸುಂದರ ಪುರಾಣಿಕ ಸಂಯುಕ್ತ ಪ್ರೌಢಶಾಲೆ ಕಾರ್ಕಳ ವಲಯ ಇವರಿಗೆ ಆಯ್ಕೆ ಮಾಡಲಾಯಿತು.
ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾ ಸಮಿತಿಯ ಗೌರವ ಸಲಹೆಗಾರ ಮಲ್ಲಿಕಾ, ಹೆಸ್ಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಶೇಖರ್, ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾ ಸಮಿತಿಯ ಗೌರವ ಸಲಹೆಗಾರರಾದ ಮಲ್ಲಿಕಾ ಬಿ. ಪೂಜಾರಿ , ಹೆಸ್ಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶೇಖರ್, ಕುಂದಾಪುರ ಪುರಸಭಾ ಘಟಕದ ಅಧ್ಯಕ್ಷರಾದ ಅಶ್ವತ್ ಕುಮಾರ್, ಬ್ರಹ್ಮಾವರ ತಾಲ್ಲೂಕು ಘಟಕದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ಉಷಾ ರಮೇಶ್ , ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಸಾಧಿಕ್ ಮಾವಿನ ಕಟ್ಟೆ,
ಕಾಪು ತಾಲೂಕು ಉಸ್ತುವಾರಿಗಳಾದ ಅಷ್ಫಾಕ್, ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ಪ್ರಮೋದಾ ಕುಶಲ್ ಶೆಟ್ಟಿ ಸ್ವಾಗತಿಸಿದರು. ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ಜಿಲ್ಲಾ ಕಾರ್ಯದರ್ಶಿ ದೀಪಾ ಜಪ್ತಿ ಕಾರ್ಯಕ್ರಮ ನಿರೂಪಿಸಿದರು. ಪುರಸಭಾ ಘಟಕದ ಕಾರ್ಯದರ್ಶಿ ವರದಾ ಸುಧಾಕರ್ ಆಚಾರ್ಯ ವಂದಿಸಿದರು.











