ಕುಂದಾಪುರ :ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ಸಾವು

0
3755

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕೋಣಿ ಎಂಬಲ್ಲಿ ಅ.3ರಂದು ನಸುಕಿನ ವೇಳೆ ನಡೆದಿದೆ.
ಮೃತರನ್ನು ಕೃಷ್ಣ ಪೂಜಾರಿ(45) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 2ರ ರಾತ್ರಿ ಕುಂದಾಪುರದ ದಸರಾ ಮೆರವಣಿಗೆ ಮುಗಿಸಿ ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ಬಸ್ರೂರು ಮೂರುಕೈಯಿಂದ ಕೋಣಿ ಕಡೆಗೆ ಹೋಗುತ್ತಿದ್ದ ಬೈಕ್ ಆಯತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಕೃಷ್ಣ ಪೂಜಾರಿ ತಲೆಗೆ ವಿದ್ಯುತ್ ಕಂಬಕ್ಕೆ ತಾಗಿ ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ.

Click Here

ಇದರಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ ಪುತ್ರರನ್ನು ಅಗಲಿದ್ದಾರೆ. ಇವರು ಕೋಣಿ ಗ್ರಾಮ ಪಂಚಾಯತ್ ಬಳಿ ಹಣ್ಣಿನ ಹಾಗೂ ತರಕಾರಿ ಅಂಗಡಿ ನಡೆಸುತ್ತಿದ್ದರು.

Click Here

LEAVE A REPLY

Please enter your comment!
Please enter your name here