ಗಂಗೊಳ್ಳಿ ಮೀನುಗಾರಿಕೆ ಬಂದರಿನ ಆಧುನೀಕರಣ ಕಾಮಗಾರಿಗೆ ಶಂಕುಸ್ಥಾಪನೆ

0
488

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಗಂಗೊಳ್ಳಿ ಬಂದರು ಬಹಳ ಇತಿಹಾಸ ಇರುವ ಬಂದರು. ಆದರೆ ಇಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಇದ್ದುದರಿಂದ ಮತ್ತು ಕಾಮಗಾರಿಯಲ್ಲಿ ವ್ಯತ್ಯಾಸ ಆಗಿರುವುದರಿಂದ ಸಮಸ್ಯೆ ಉದ್ಭವಿಸಿದೆ. ಬಂದರಿನ ಜೆಟ್ಟಿ ಪುನರ್ ನಿರ್ಮಾಣಕ್ಕಾಗಿ 6.5 ಕೋಟಿ ರೂ. ಮೀಸಲಿಡಲಾಗಿದೆ. ಜೆಟ್ಟಿ ಕುಸಿತ ಪ್ರಕರಣ ಲೋಕಾಯುಕ್ತದಲ್ಲಿರುವುದರಿಂದ, ಲೋಕಾಯುಕ್ತ ವರದಿ ಬರುವ ತನಕ ಯಾವುದೇ ಅಭಿವೃದ್ಧಿ ಮಾಡುವಂತಿಲ್ಲ. ಎಷ್ಟು ಬೇಗ ಲೋಕಾಯುಕ್ತ ತನಿಖೆ ನಡೆಸಿ ವರದಿ ನೀಡುತ್ತದೆಯೋ ಅಷ್ಟು ಬೇಗ ಕೆಲಸ ಪ್ರಾರಂಭಿಸಲು ಸಹಾಯಕವಾಗಲಿದೆ. ಮೀನುಗಾರರಿಗೆ ಅನುಕೂಲ ಮಾಡಿಕೊಡಲು ಸಾಧ್ಯವಾಗುತ್ತದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡುವುದು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ಹೇಳಿದರು.

ಮೀನುಗಾರಿಕೆ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಪಿ.ಎಂ.ಎಂ.ಎಸ್.ವೈ ಯೋಜನೆಯಡಿ ಗಂಗೊಳ್ಳಿ ಮೀನುಗಾರಿಕೆ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಬುಧವಾರ ನೆರವೇರಿಸಿ ಅವರು ಮಾತನಾಡಿದರು.

Click Here

5 ಸಾವಿರ ಕೋಟಿ ಕೊಟ್ಟರೆ ಎಲ್ಲಾ ಬಂದರು ಅಭಿವೃದ್ಧಿ ಮಾಡಬಹುದು. ಅಂತಹ ಪರಿಸ್ಥಿತಿ ಇದೆ. ಬಂದರುಗಳ ಅಭಿವೃದ್ಧಿಗೆ ತೊಡಕಾಗಿದ್ದ ಸಿಆರ್‍ಝಡ್ ಸಮಸ್ಯೆ ಬಗೆಹರಿಸಲು ಒಂದುವರೆ ವರ್ಷ ತಗುಲಿದ್ದು, ಇದೇ ಸಮಸ್ಯೆಯಿಂದಾಗಿ ಮರವಂತೆ ಹೊರಬಂದರು ಕಾಮಗಾರಿಯ ಸುಮಾರು 68 ಕೋಟಿ ರೂ. ಹಾಗೆ ಬಾಕಿ ಉಳಿದಿತ್ತು. 340 ಕಿ.ಮೀ ಉದ್ದದ ಕರಾವಳಿ ಪ್ರದೇಶದಲ್ಲಿ 13 ಬಂದರುಗಳಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ಮೂರು ಬಂದರುಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಗಂಗೊಳ್ಳಿ ಮೀನುಗಾರಿಕೆ ಬಂದರಿನ ಆಧುನೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಜಂಟಿಯಾಗಿ ಸುಮಾರು 22.18 ಕೋಟಿ ರೂ. ಮೀಸಲಿಟ್ಟಿದ್ದು, ಮಳೆಗಾಲ ಪ್ರಾರಂಭವಾಗುವುದರ ಒಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಗಂಗೊಳ್ಳಿ ಬಂದರು ಬಹಳ ಹಿಂದುಳಿದಿದೆ. ಜೆಟ್ಟಿ ಸಮಸ್ಯೆ, ಡ್ರೆಜ್ಜಿಂಗ್ ಸಮಸ್ಯೆಗಳೇ ಕೊಳೆಯುತ್ತಿದೆ. ಸಾಗರಾ ಮಾಲಾ ಮತ್ತು ಮತ್ಸ್ಯಸಂಪದ ಯೋಜನೆಯಡಿ ಬಂದರುಗಳನ್ನು ಅಭಿವೃದ್ಧಿಪಡಿಸಲು ವಿಪುಲ ಅವಕಾಶಗಳಿವೆ. ಈ ಭಾಗದಲ್ಲಿ ದೂರದೃಷ್ಟಿಯ ಯೋಜನೆಗಳಿಗೆ ತುಂಬಾ ಅವಕಾಶಗಳಿವೆ. ಕೇಂದ್ರದ ಯೋಜನೆಗಳನ್ನು ತರಲು ಯಾವುದೇ ಕಾರಣಕ್ಕೂ ಹಿಂದೆ ಬೀಳಬಾರದು. ಇರುವ ಅವಕಾಶಗಳನ್ನು ಚೆನ್ನಾಗಿ ಉಪಯೋಗಿಸುವ ದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಅವರು ಹೇಳಿದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ, ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ ಕುಮಾರ್ ಕಳ್ಳೇರ್, ಮೀನುಗಾರಿಕೆ ಅಪರ ನಿರ್ದೇಶಕ ಸಿದ್ಧಯ್ಯ ಡಿ., ಜಂಟಿ ನಿರ್ದೇಶಕ ವಿವೇಕ ಆರ್., ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಸನ್ನ ಕುಮಾರ್ ಶೇಟ್, ಉಪನಿರ್ದೇಶಕ ಸಂಜೀವ ಅರಕೇರಿ, ಸಹಾಯಕ ನಿರ್ದೇಶಕ ಆಶಾಲತಾ, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಶೋಭಾ, ಸಹಾಯಕ ನಿದೇಶಕಿ ಸುಮಲತಾ ಮೊದಲಾದವರು ಉಪಸ್ಥಿತರಿದ್ದರು.

ಸುಂದರ ಜಿ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಮೀನುಗಾರಿಕೆ ಇಲಾಖೆಯ ಗೋಪಾಲಕೃಷ್ಣ ವಂದಿಸಿದರು.

Click Here

LEAVE A REPLY

Please enter your comment!
Please enter your name here