ಕಿರಿಮಂಜೇಶ್ವರ :ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲು

0
426

Click Here

Click Here

ಕುಂದಾಪುರ ಮಿರರ್ ಸುದ್ದಿ…

ಬೈಂದೂರು: ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಬೀಚ್‌ನಲ್ಲಿ ಮಂಗಳವಾರ ಸಂಜೆ ನಡೆದಿದೆ.

ಸ್ಥಳೀಯ ನಿವಾಸಿಗಳಾದ ಸಂಕೇತ್ (16), ಸೂರಜ್ (15), ಆಶೀಶ್ (14) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಮೃತದೇಹ ಪತ್ತೆಯಾಗಿದೆ. ಈಜಲು ತೆರಳಿದ್ದ ನಾಲ್ವರಲ್ಲಿ ಓರ್ವ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

Click Here

ಮೃತರಲ್ಲಿ ಓರ್ವ ಪಿಯುಸಿ ವಿದ್ಯಾರ್ಥಿಯಾಗಿದ್ದು ಇನ್ನಿಬ್ಬರು ಸರಕಾರಿ ಶಾಲೆಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಬೈಂದೂರು ಪಿಎಸ್‌ಐ ತಿಮ್ಮೇಶ್, ಶಾಸಕ ಗುರುರಾಜ್ ಗಂಟಿಹೊಳೆ, ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಪೂಜಾರಿ ಮೊದಲಾದವರು ಭೇಟಿ ನೀಡಿದ್ದಾರೆ.

ತಾಲೂಕು ಆರೋಗ್ಯ ಕೇಂದ್ರ ಬೈಂದೂರಿನಲ್ಲಿ ಶವಗಾರದಲ್ಲಿ ಮಕ್ಕಳ ಪಾರ್ಥಿವ ಶರೀರವನ್ನು ಇಡಲಾಯಿತು.ಕುಂದಾಪುರ

Click Here

LEAVE A REPLY

Please enter your comment!
Please enter your name here