ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಸೈಬರ್ ಸೆಕ್ಯೂರಿಟಿ ಹಾಗೂ ಕೆರಿಯರ್ ಗೈಡೆನ್ಸ್ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಡಾ. ಅನಂತ ಪ್ರಭು.ಜಿ ಕಂಪ್ಯೂಟರ್ ಇಂಜಿನಿಯರಿಂಗ್ ಹಾಗೂ ಸೈಬರ್ ಸೆಕ್ಯೂರಿಟಿ ಮತ್ತು ಸೈಬರ್ ಲಾ ಟ್ರೈನರ್ ಇವರು ಕಾರ್ಯಗಾರವನ್ನು ಉದ್ದೇಶಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದಿಸುತ್ತಾ, ತಂತ್ರಜ್ಞಾನದ ಬೆಳವಣಿಗೆ ಮತ್ತು ಅದನ್ನು ಸಮರ್ಥವಾಗಿ ಬಳಿಸಿಕೊಳ್ಳುವ ಬಗ್ಗೆ ನಮಗೆ ಅರಿವಿರಬೇಕು. ಚಾರ್ಜ್ ಜಿಪಿಟಿ, ರೋಬೋಟ್ಸ್ ಮುಂತಾದ ತಂತ್ರಜ್ಞಾನದ ಬಳಕೆಯ ಬಗ್ಗೆ ಅರಿವಿರುವುದು ಮಾತ್ರವಲ್ಲದೆ, ಅವುಗಳ ದುರ್ಬಳಕೆ ಆಗದಂತೆ ಎಚ್ಚರ ವಹಿಸಬೇಕು. ಮಕ್ಕಳ ಚಿಂತನಾ ಶಕ್ತಿಯನ್ನು ಇಂತಹ ತಂತ್ರಜ್ಞಾನಗಳು ಕುಂಠಿತಗೊಳಿಸಬಾರದು. ನನ್ನ ಶಕ್ತಿ, ನನ್ನ ಆಸಕ್ತಿ, ನನ್ನ ಗುರಿ ಮತ್ತು ನನ್ನ ದೌರ್ಬಲ್ಯಗಳ ಬಗ್ಗೆ ತಿಳುವಳಿಕೆ ಇದ್ದರೆ ಯಶಸ್ಸಿನ ಹಾದಿಯನ್ನು ಮುಟ್ಟಬಹುದು ಎಂದರು.
ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಅನುಪಮಾ ಎಸ್. ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಗಾರಕ್ಕೆ ಶುಭ ಕೋರಿದರು.
ಗುರುಕುಲ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರೂಪಾ ಶಣೈರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ಶಿಕ್ಷಕರಾದ ವಿಷ್ಣು ತಾಂಡೇಲ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ವೈಷ್ಣವಿ ಮತ್ತು ಹವಿಶ ಪ್ರಾರ್ಥಿಸಿದರು. ಶಿಕ್ಷಕಿ ಸುಷ್ಮಾ ಮುರಳಿ ವಂದಿಸಿದರು.











