ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಶಾಸ್ತ್ರಿ ಸರ್ಕಲ್ ಸಮೀಪ ಸಮಾಜ ಕಲ್ಯಾಣ ಇಲಾಖೆಯ ಡಾ. ಬಾಬಾ ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಇವರ ಆರ್ಥಿಕ ನೆರವಿನಿಂದ ನಿರ್ಮಾಣಗೊಂಡ ಪಾದುಕೆ ಕುಟಿರವನ್ನು ಪುರಸಭಾ ಅಧ್ಯಕ್ಷರಾದ ಮೋಹನ್ ದಾಸ್ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಪುರಸಭಾ ಉಪಾಧ್ಯಕ್ಷರಾದ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರಭಾಕರ, ಸದಸ್ಯರಾದ ದೇವಕಿ ಸಣ್ಣಯ್ಯ, ರೋಹಿಣಿ ಉದಯ್, ಶೇಖರ್ ಪೂಜಾರಿ, ಪಶು ವೈದ್ಯಾಧಿಕಾರಿ ಅರುಣ್ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಇಲಾಖೆಯ ಜಿಲ್ಲಾ ಸಂಯೋಜಕರಾದ ತಿಪ್ಪೇಸ್ವಾಮಿ ಇವರನ್ನು ಸನ್ಮಾನಿಸಲಾಯಿತು.
ಪತ್ರಕರ್ತ ನಾಗರಾಜ್ ರಾಯಪ್ಪನ ಮಠ ಕಾರ್ಯಕ್ರಮ ನಿರೂಪಿಸಿ ಸಂಸ್ಥೆ ಮಾಲೀಕ ವಿಷ್ಣು ವಂದಿಸಿದರು.











