ಪಂಚವರ್ಣದ ರಾಜ್ಯೋತ್ಸವ ಅರ್ಥಪೂರ್ಣ – ಶಾಸಕ ಕಿರಣ್ ಕುಮಾರ್ ಕೊಡ್ಗಿ

0
454

Click Here

Click Here

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಆಮಂತ್ರಣ ಬಿಡುಗಡೆ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಪಂಚವರ್ಣ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ವ್ಯವಸ್ಥೆಗೆ ಕೈಗನ್ನಡಿಯಾಗಿದೆ. ಸಮಾಜದೊಂದಿಗೆ ಸಮಾಜಮುಖಿ ಕಾರ್ಯ ನಡೆಸುವ ಪಂಚವರ್ಣದ ಕಾರ್ಯವೈಖರಿ ಪ್ರಶಂಸನೀಯ ಎಂದು ಕುಂದಾಪುರ ವಿಧಾನಸಭಾ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ನವೆಂಬರ್ 16 ರಂದು ಕೋಟದ ಗಾಂಧಿಮೈದಾನದಲ್ಲಿ ನಡೆಯಲಿರುವ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಸದ್ಭಾವನಾ – 2025ರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಕನ್ನಡ ನಾಡುನುಡಿಯ ಬಗ್ಗೆ ಸೇವೆ ಸಲ್ಲಿಸಿದ ದೊಡ್ಡ ದೊಡ್ಡ ಸಾಧಕರನ್ನು ಗುರುತಿಸುವ ಕಾಯಕ ಒಂದಿಷ್ಟು ಸೇವಾಕಾರ್ಯ. ಈ ಕಾರ್ಯಕ್ರಮದಲ್ಲಿ ಜೋಡಿಸಿಕೊಂಡ ಪಂಚವರ್ಣ ಸಂಘಟನೆಯ ಈ ಕಾರ್ಯ ಯಶಸ್ವಿಯಾಗಲಿ ಎಂದು ಹಾರೈಸಿದರು.

Click Here

ಈ ಸಂದರ್ಭದಲ್ಲಿ ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ಟ್ರಸ್ಟಿ ಕೆ. ಅನಂತಪದ್ಮನಾಭ ಐತಾಳ್, ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ, ಪಂಚವರ್ಣದ ಗೌರವ ಸಲಹೆಗಾರರಾದ ಭಾರತಿ ವಿ ಮಯ್ಯ, ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್, ಮಾಜಿ ತಾ.ಪಂ ಸದಸ್ಯೆ ಲಲಿತಾ ಪೂಜಾರಿ, ಕೋಟ ಪಂಚಾಯತ್ ಮಾಜಿ ಸದಸ್ಯ ರವೀಂದ್ರ ಜೋಗಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮಾಜಿ ಅಧ್ಯಕ್ಷರಾದ ಅಜಿತ್ ಆಚಾರ್, ನಾಗರಾಜ್ ಗಾಣಿಗ, ಗಿರೀಶ್ ಆಚಾರ್, ಸಂಚಾಲಕ ಅಮೃತ್ ಜೋಗಿ ,ಉಪಾಧ್ಯಕ್ಷರಾದ ಸಂತೋಷ್ ಪೂಜಾರಿ, ದಿನೇಶ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿ, ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Click Here

LEAVE A REPLY

Please enter your comment!
Please enter your name here