ವಕ್ವಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕುಂದಾಪುರ ತಾಲೂಕು ಮಟ್ಟದ 14 ಮತ್ತು 17ರ ಬಾಲಕ -ಬಾಲಕಿಯರ ಕ್ರೀಡಾಕೂಟ 2025-26 ಉದ್ಘಾಟನೆ

0
339

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ 14 ಮತ್ತು 17ರ ಬಾಲಕ ಬಾಲಕಿಯರ ಕ್ರೀಡಾಕೂಟ 2025-26 ಅಕ್ಟೋಬರ್ 30 ರಂದು ವಕ್ವಾಡಿ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಪಥಸಂಚಲನೆಯಲ್ಲಿ ಕ್ರೀಡಾ ವಂದನೆಯನ್ನು ಸ್ವೀಕರಿಸಿದ ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ಕ್ರೀಡಾಕೂಟವನ್ನು ಊರಿನ ಹಬ್ಬದಂತೆ ಸಂಭ್ರಮಿಸಿ,ಅದರ ಯಶಸ್ವಿಗಾಗಿ ಎಲ್ಲಾ ಮಕ್ಕಳು ಭಾಗವಹಿಸಿ ವಿದ್ಯಾಭ್ಯಾಸದೊಂದಿಗೆ ಕ್ರೀಡೆಯಲ್ಲಿ ಆಸಕ್ತಿ ತೋರಿಸಿ, ಕ್ರೀಡಾ ಸ್ಪೂರ್ತಿ ಮೆರೆದು ಶಿಕ್ಷಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯ ಎಂದರು.

Click Here

ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ್ ಶೆಟ್ಟಿಗಾರ್ ಕ್ರೀಡಾ ಧ್ವಜಾರೋಹಣಗೈದರು. ಬೆಲೂನ್ ಹಾರಿಸಿ ಬಿಡುವುದರ ಮೂಲಕ ಉದ್ಯಮಿ ಗಜೇಂದ್ರ ಶೆಟ್ಟಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಉದ್ಯಮಿ ಸಣಗಲ್ಲು ಮನೆ ಪ್ರವೀರ್ ಕುಮಾರ್ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿಸಿದರು.

ವೇದಿಕೆಯಲ್ಲಿ ಯುವಜನ ಸೇವಾ ಕ್ರೀಡಾಧಿಕಾರಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಕುಸುಮಾಕರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಶೆಟ್ಟಿ ವಕ್ವಾಡಿ, ಶ್ರೀಮತಿ ಭಾರತಿ, ರವಿರಾಜ್ ಶೆಟ್ಟಿ ಎಸ್ ಡಿಎಂ ಸಿ ಅಧ್ಯಕ್ಷ ರಾಜು ಕುಲಾಲ್, ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ, ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ, ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಾನಾಡಿ ಸಂಪತ್ ಕುಮಾರ್ ಶೆಟ್ಟಿ, ನರಸಿಂಹ ಪೂಜಾರಿ ವಕ್ವಾಡಿ, ವಕ್ವಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಲಾಡಿ ರಾಜೀವ್ ಶೆಟ್ಟಿ, ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಸಣಗಲ್ ಮನೆ, ಕ್ರೀಡಾಕೂಟದ ಕಾರ್ಯದರ್ಶಿ ಸತೀಶ್ ಪೂಜಾರಿ, ಕ್ರೀಡಾಕೂಟ ಸಮಿತಿಯ ಖಜಾಂಚಿ ವಿ.ಕೆ.ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಕರುಣಾಕರ ಶೆಟ್ಟಿ, ಉದ್ಯಮಿ ಅಶೋಕ್ ಪೂಜಾರಿ, ಸಮಾಜ ಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಕ್ವಾಡಿ ಬಾಲಕೃಷ್ಣ ಶೆಟ್ಟಿ, ಕಿಶನ್ ರಾಜ್ ಶೆಟ್ಟಿ, ಗಣೇಶ್ ಕುಮಾರ್ ಶೆಟ್ಟಿ, ಉದಯ ಮಡಿವಾಳ, ಶರತ್ ಕುಮಾರ್ ಶೆಟ್ಟಿ, ಚಂದ್ರ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ವಕ್ವಾಡಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಬಿ ವಂದಿಸಿದರು, ಚಾರಿತ್ರ್ಯ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.

Click Here

LEAVE A REPLY

Please enter your comment!
Please enter your name here