ಕುಂದಾಪುರ :ಗ್ರಾಮೀಣ ಐ.ಟಿ.ರಸಪ್ರಶ್ನೆ; ಮನ್ವಿತ್ ಬಿ. ವಿಭಾಗೀಯ ಮಟ್ಟಕ್ಕೆ ಆಯ್ಕೆ

0
107

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್) ಏರ್ಪಡಿಸಿದ್ದ ಉಡುಪಿ ಜಿಲ್ಲಾಮಟ್ಟದ ಗ್ರಾಮೀಣ ಐ.ಟಿ.ರಸಪ್ರಶ್ನೆ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಮನ್ವಿತ್ ಬಿ. ಉತ್ತಮ ಪ್ರದರ್ಶನ ನೀಡಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯು ಕೆ. ಸುರೇಶ್ ಭಂಡಾರಿ ಹಾಗೂ ಜಯಶ್ರೀ ದಂಪತಿಯ ಪುತ್ರ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಸಹಯೋಗದಲ್ಲಿ ಈ ಸ್ಪರ್ಧೆ ಆಯೋಜನೆಗೊಂಡಿತ್ತು.

Click Here

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.

Click Here

LEAVE A REPLY

Please enter your comment!
Please enter your name here