ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0
438

Click Here

Click Here

ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ :ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆ, ಅಂಪಾರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ನಾಡು, ನುಡಿ, ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವಂತಹ ವಾತಾವರಣವನ್ನು ಸೃಷ್ಟಿಸಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜಯ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಇವರು ವಹಿಸಿದ್ದರು.

ಕಾರ್ಯಕ್ರಮವನ್ನು ಹೈದರಾಬಾದ್‌ನ ಹೋಟೆಲ್ ಉದ್ಯಮಿ ಶೇಖರ್ ಶೆಟ್ಟಿ ವಂಡ್ಸೆ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಕಾರ್ಯದರ್ಶಿ ನವೀನ್ ಕುಮಾರ್ ಶೆಟ್ಟಿ, ಖಜಾಂಚಿ ಕೊಡ್ಲಾಡಿ ಸುಭಾಷ್‌ಚಂದ್ರ ಶೆಟ್ಟಿ, ನಿರ್ದೇಶಕ ಉಮೇಶ್ ಕೊಠಾರಿ ಮುಂತಾದವರು ಉಪಸ್ಥಿತರಿದ್ದರು.

Click Here

ಶಾಲಾ ಆಡಳಿತಾಧಿಕಾರಿ ಶ್ರೀಮತಿ ಚೈತ್ರಾ ಯಡಿಯಾಳ ಅವರು ಎಲ್ಲ ಗಣ್ಯರನ್ನು ಮತ್ತು ಉಪಸ್ಥಿತರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ವಿದ್ಯಾರ್ಥಿಗಳು ಕನ್ನಡ ಮತ್ತು ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಹಲವಾರು ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ಅತಿಥಿಗಳು ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕರ್ನಾಟಕದ ಏಕೀಕರಣದ ಕುರಿತು ಮಾತನಾಡಿದರು.

ಕಾರ್ಯಕ್ರಮವು ಕನ್ನಡ ನಾಡಗೀತೆಯೊಂದಿಗೆ ಮುಕ್ತಾಯಗೊಂಡಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕನ್ನಡ ನಾಡಿನ ಬಗ್ಗೆ ಹೆಮ್ಮೆ ಮತ್ತು ಅಭಿಮಾನವನ್ನು ಮೂಡಿಸಿತು.

Click Here

LEAVE A REPLY

Please enter your comment!
Please enter your name here