ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0
93

Click Here

Click Here

ಕುಂದಾಪುರ ಮಿರರ್ ಸುದ್ದಿ…

ಬೈಂದೂರು: ಕಿರಿಮಂಜೇಶ್ವರದಲ್ಲಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಕುಮಾರ ರಜತ್ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Click Here

ಜನತಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ, ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವಿಶ್ವನಾಥ ದೇವಾಡಿಗ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು.
ಜನತಾ ಪದವಿ ಪೂರ್ವ ಕಾಲೇಜು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Click Here

LEAVE A REPLY

Please enter your comment!
Please enter your name here