ಕುಂದಾಪುರ ಮಿರರ್ ಸುದ್ದಿ…





ಕುಂದಾಪುರ : ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನೂತನ ಅಧ್ಯಕ್ಷರಾಗಿ ಹೆಚ್. ಹರಿಪ್ರಸಾದ್ ಶೆಟ್ಟಿ ಅವರು ಮೂರನೇ ಬಾರಿಗೆ ಪುನರಾಯ್ಕೆಗೊಂಡಿದ್ದಾರೆ.
ಶನಿವಾರ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಆನಂದ ಬಿಲ್ಲವ, ಉಮೇಶ್ ಶೆಟ್ಟಿ ಕಲ್ಗದ್ದೆ, ಎ. ಕಿರಣ ಹೆಗ್ಡೆ ಅಂಪಾರು, ಎಸ್. ಜಯರಾಮ ಶೆಟ್ಟಿ, ಪ್ರಭಾಕರ ಶೆಟ್ಟಿ ಕೆರಾಡಿ, ಪ್ರಭಾಕರ ಶೆಟ್ಟಿ ಜಡ್ಕಲ್, ಎಂ. ಮೋಹನ್ ದಾಸ್ ಶೆಟ್ಟಿ, ಸತೀಶ ಶೆಟ್ಟಿ ಕೆ., ಸದಾನಂದ ಮೊಗವೀರ ಬಳ್ಕೂರು, ರಕ್ಷಿತ್ ಶೆಟ್ಟಿ ಸಳ್ವಾಡಿ, ಕೆ. ವಿಜಯ ಕುಮಾರ್ ಕಂಡ್ಲೂರು, ಮತ್ತಿತರರು ಉಪಸ್ಥಿತರಿದ್ದರು.
ಎಸ್ ಡಿಸಿಸಿ ಬ್ಯಾಂಕ್ ನಿರ್ದೇಶಕ ಮೊಳಹಳ್ಳಿ ಮಹೇಶ ಹೆಗ್ಡೆ, ಮಾಜಿ ನಿರ್ದೇಶಕ ಎಸ್. ರಾಜು ಪೂಜಾರಿ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ವಂಡ್ಸೆ ವ್ಯವಸಾಯಿಕ ಸೇವಾ ಸಹಕಾರಿ ಸಂಘ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ, ಅಂಪಾರು ವ್ಯವಸಾಯಿಕ ಸೇವಾ ಸಹಕಾರಿ ಸಂಘ ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಮುಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಪ್ರಸನ್ನ ಕುಮಾರ್ ಶೆಟ್ಟಿ, ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ಯಡಿಯಾಳ್, ಬ್ರಹ್ಮಾವರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷೆ ಸುನಿತಾ ಶೆಟ್ಟಿ ಮತ್ತಿತರರು ನೂತನ ಆಡಳಿತ ಮಂಡಳಿಗೆ ಶುಭಹಾರೈಸಿದರು.
ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಪ್ರಸಾದ್ ಶೆಟ್ಟಿ ಸ್ವಾಗತಿಸಿ, ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು.











