ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಹಾಗೂ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ 14ರ ವಯೋಮಿತಿ ಒಳಗಿನ ಹಾಗೂ 17 ವಯೋಮಿತಿಯ ಮತ್ತು ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟ ನವಂಬರ್ 12, 13 ಮತ್ತು 14ರಂದು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು, ಹೆಮ್ಮಾಡಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜನತಾ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ನಾಯ್ಕ್ ತಿಳಿಸಿದರು.
ಅವರು ಕುಂದಾಪುರ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ.12ರ ಬೆಳ್ಳಿಗೆ 9.30 ಕ್ಕೆ ಹೆಮ್ಮಾಡಿ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ ಕಾಲೇಜಿನ ಕ್ರೀಡಾಂಗಣದವರೆಗೆ ವೈಭವದ ಮೆರವಣಿಗೆ ನಡೆಯಲ್ಲಿದ್ದು, ನಂತರ ಗಣ್ಯರ ಉಪಸ್ಥಿತಿಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ಕ್ರೀಡಾ ಕೂಟದಲ್ಲಿ ಉಡುಪಿ ಜಿಲ್ಲೆಯ 5 ಶೈಕ್ಷಣಿಕ ವಲಯ (ಬೈಂದೂರು, ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾರ್ಕಳ) ಮಟ್ಟದಲ್ಲಿ ಪ್ರಥಮ, ದ್ವೀತಿಯ ಸ್ಥಾನ ಪಡೆದ ಕ್ರೀಡಾಪಟುಗಳು ಈ ಒಂದು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ನ.14ರಂದು ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾ ಕೂಟ ನಡೆಯಲಿದೆ. ಅಂದು ಸಮರೋಪ ಸಮಾರಂಭ ನಡೆಯಲಿದೆ ಎಂದರು.
ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಮಾತನಾಡಿ, ಮೂರು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದೆ. 14 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರಿಗೆ 10 ವಿವಿಧ ಸ್ಪರ್ಧೆಗಳು, 17 ವರ್ಷ ವಯೋಮಿತಿಯ ವಿದ್ಯಾರ್ಥಿಗಳಿಗೆ 19 ವಿವಿಧ ಸ್ಪರ್ಧೆಗಳು ನಡೆಯಲಿದೆ.
ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಮಾತನಾಡಿ, ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಕೆಯೊಂದಿಗೆ ಕ್ರೀಡೆ, ಸಾಂಸ್ಕøತಿಕ ವಿಕಾಸನಕ್ಕೂ ಒತ್ತು ನೀಡಲಾಗುತ್ತಿದೆ. ಕಳೆದ ವರ್ಷ ನಮ್ಮ ಸಂಸ್ಥೆಯ 50 ವಿದ್ಯಾರ್ಥಿ ರಾಜ್ಯ ಮಟ್ಟ, 5 ವಿದ್ಯಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಈ ಬಾರಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಬಾರಿಯ ಜಿಲ್ಲಾ ಮಟ್ಟದ ಕ್ರೀಡಾಕೂಟದ ಆತಿಥ್ಯ ನಮ್ಮ ಸಂಸ್ಥೆಗೆ ದೊರಕಿದ್ದು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಉಪನ್ಯಾಸಕ ನಾಗರಾಜ ಅಲ್ತಾರು, ನ್ಯೂ ಜನತಾ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥ ದೇವಾಡಿಗ ಉಪಸ್ಥಿತರಿದ್ದರು.











