ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು ಇದರ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಮತ್ತು ಸುನೀಲ್ ಬಜಗೋಳಿ ಇವರು ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಅವರನ್ನು ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಇವರು ಸ್ವಾಗತಿಸಿ, ಸಂಘದ ವ್ಯವಹಾರ ಅಭಿವೃದ್ಧಿ, ಸಂಘದ ಯೋಜನೆಗಳು, ಸದಸ್ಯರಿಗೆ ನೀಡಲಾಗುತ್ತಿರುವ ಸೇವೆಗಳು ಮತ್ತು ಸವಲತ್ತುಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದರು. ಸಂಘದ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರು ಮತ್ತು ನಿರ್ದೇಶಕರು ಸಂಘದ ವ್ಯವಸ್ಥಿತ ಕಾರ್ಯವೈಖರಿ, ಸೇವಾ ಮನೋಭಾವ ಹಾಗೂ ಕಾರ್ಯತತ್ಪರತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಘದ ಅಭಿವೃದ್ಧಿ ಮತ್ತು ಜನಪರ ಕಾರ್ಯಗಳನ್ನು ಶ್ಲಾಘಿಸಿದರು. ಅವರನ್ನು ಸಂಘದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಂಘದ ವಿಶಿಷ್ಟ ಯೋಜನೆಗಳಲ್ಲಿ ಒಂದಾದ ‘ಸಕಲ’ ಕೃಷಿ ಉಪಕರಣಗಳ ಮಾರಾಟ ಮಳಿಗೆಗೆ ಅವರು ಭೇಟಿ ನೀಡಿದರು. ಈ ಸಂದರ್ಭ ಸಂಘದ ನಿರ್ದೇಶಕರೆಲ್ಲರೂ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಧನ್ಯವಾದ ಸಲ್ಲಿಸಿದರು.











