ನ.16ರಂದು ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

0
423

Click Here

Click Here

ಅಶಕ್ತ, ಅನಾರೋಗ್ಯ ಪೀಡಿತರಿಗೆ ನೆರವು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2025ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮ ಇದೇ ನವೆಂಬರ್ 16 ರಂದು ಸಂಜೆ ಕೋಟದ ಗಾಂಧಿ ಮೈದಾನದಲ್ಲಿ ಜರಗಲಿದೆ.

ಈ ಪ್ರಯುಕ್ತ ರಾಜ್ಯದ ಪ್ರಸಿದ್ಧ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದ್ದು, ಕನ್ನಡ ನಾಡು ಕಂಡ ಶ್ರೇಷ್ಠ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಇವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಲಿದೆ.

Click Here

ವಿಶ್ವವಿಖ್ಯಾತ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ ಇವರಿಗೆ ವಿಶೇಷ ಪುರಸ್ಕಾರ, ರಾಜ್ಯೋತ್ಸ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ವಿಶೇಷ ಅಭಿನಂದನೆ .ಮಾಸ್ಟರ್ ಅಥ್ಲೆಟಿಕ್ ಪಟು ಅಶ್ವಿನಿ ಅರಳ ಇವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ನಡೆಯಲಿದೆ.

ಉಡುಪಿಯ ಹೊಸಬದುಕು ಆಶ್ರಮಕ್ಕೆ ಪರಿಕರ,ಅಶಕ್ತ ಅನಾರೋಗ್ಯ ಪೀಡಿತರಿಗೆ, ಬನ್ನಾಡಿ ಪದ್ದು ಆಚಾರ್ಯ ಸ್ಮರಣಾರ್ಥ ಆರೋಗ್ಯ ನಿಧಿ ವಿತರಣೆ, ಸಂತೋಷ್ ಕುಮಾರ್ ವಿದ್ಯಾನಿಧಿ ವಿತರಣೆ, ಸ್ಥಳೀಯ ಕನ್ನಡ ಮಾಧ್ಯಮ ಶಾಲೆಗಳಿಗೆ ದತ್ತಿನಿಧಿ, ಅಂಗನವಾಡಿ ಶಾಲೆಗಳಿಗೆ ವಿವಿಧ ಪರಿಕರ ಹಸ್ತಾಂತರ ನಡೆಯಲಿದೆ. ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಬೆಂಗಳೂರು ಪ್ರಸಿದ್ಧ ಸಿ.ಎ ಸಂಸ್ಥೆ ಕ್ಯಾಪ್ಸ್ ಫೌಂಡೇಶನ್ ಮುಖ್ಯಸ್ಥ ಸಿ.ಎ ಚಂದ್ರಶೇಖರ ಶೆಟ್ಟಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮವನ್ನು ಸಮಾಜಸೇವಕ ಆನಂದ್ ಸಿ ಕುಂದರ್ ಉದ್ಘಾಟಿಸಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಮಾಜಸೇವಕ ಬನ್ನಾಡಿ ನಾರಾಯಣ ಆಚಾರ್, ಡಾ.ಕೃಷ್ಣ ಕಾಂಚನ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸ್ಥಳೀಯ ಕೋಟತಟ್ಟು, ಕಲ್ಮಾಡಿ , ಮಣೂರು, ಕಾಸನಗುಂದು ಅಂಗನವಾಡಿ ಪುಟಾಣಗಳಿಂದ ನೃತ್ಯ ಸಿಂಚನ, ಪಂಚವರ್ಣ ಮಹಿಳಾ ಮಂಡಲ ಮಹಿಳೆಯರಿಂದ ಯಕ್ಷ ನೃತ್ಯ ಹಾಗೂ ಜಿಲ್ಲೆಯ ಪ್ರಸಿದ್ಧ ನೃತ್ಯ ತಂಡ ಕುಂಭಾಶಿಯ ಮಯೂರಿ ನೃತ್ಯ ತಂಡದಿಂದ ಸಾಂಸ್ಕೃತಿಕ ಕಲರವ, ರಾತ್ರಿ 9ಕ್ಕೆ ಮಂಗಳೂರಿನ ಪ್ರಸಿದ್ಧ ನಾಟಕ ತಂಡ ಚಾಪರ್ಕ ಕಲಾವಿದರಿಂದ ಯಾರೂ ಗ್ಯಾರಂಟಿ ಅಲ್ಲ ನಾಟಕ ಪ್ರದರ್ಶನ ನಡೆಯಲಿದೆ ಎಂದು ಪಂಚವರ್ಣ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here