ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅರಳುವ ವೇದಿಕೆಯಾಗಲಿ :ದಿನೇಶ್ ಹೆಗ್ಡೆ ಮೊಳಹಳ್ಳಿ ಅಭಿಮತ

0
282

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ವ್ಯಕ್ತಪಡಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರ ಸೂಸಲು ಇಂತಹ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಮೊಳಹಳ್ಳಿ ದಿನೇಶ್ ಹೆಗ್ಡೆ ಜಯ ರತ್ನ ಚಾರಿಟೇಬಲ್ ಟ್ರಸ್ಟ್ (ರಿ.) ಮೊಳಹಳ್ಳಿ ಇದರ ಪ್ರವರ್ತಕರಾದ ದಿನೇಶ್ ಹೆಗ್ಡೆ ಯವರು ಕರೆ ನೀಡಿದರು.

ಅವರು ನವೆಂಬರ್ 15ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕೇಂದ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಬಿದ್ಕಲ್ ಕಟ್ಟೆ ಇವರುಗಳ ಜಂಟಿ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿದರು.

Click Here

ಈ ಸಮಾರಂಭದ ಅಧ್ಯಕ್ಷತೆಯನ್ನು ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿಯವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚೈತ್ರ ವಿವೇಕ್ ಅಡಪ, ಗ್ರಾಮ ಪಂಚಾಯತ್ ಸದಸ್ಯರಾದ ಜಯಂತಿ ಶೆಟ್ಟಿ, ಶಿಕ್ಷಣ ಸಂಯೋಜಕರಾದ ಶೇಖರ್ ಯು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಸುಕನ್ಯ , ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ವಾಣಿ ಆರ್ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಪೂರ್ಣಿಮಾ ಶೆಟ್ಟಿ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಧರ್ ಉಡುಪ, ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ಹೆಚ್. ಆರ್, ಶಾಲಾ ಮುಖ್ಯೋಪಾಧ್ಯಾಯರಾದ ಗೋವಿಂದ ಎಸ್ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರಾದ ಗೋವಿಂದ ಎಸ್. ಸ್ವಾಗತಿಸಿದರು. ಶಾಲೆಯ ಸಹ ಶಿಕ್ಷಕರಾದ ಗಣೇಶ ಶೆಟ್ಟಿ ಮೊಳಹಳ್ಳಿ ನಿರೂಪಿಸಿದರು. ಸಹ ಶಿಕ್ಷಕಿ ಶೋಭಾ ಸಿ ಶೆಟ್ಟಿ ವಂದಿಸಿದರು. ಶಾಲೆಯ ಶಿಕ್ಷಕರುಗಳಾದ ವೆಂಕಟ ಕುಲಾಲ್, ಆದರ್ಶ, ಪ್ರೀತಿ ಬಿ ಶೆಟ್ಟಿ, ಸುಜಾತ, ಚೇತನಾ ಶೆಟ್ಟಿ ಸಹಕರಿಸಿದರು.

Click Here

LEAVE A REPLY

Please enter your comment!
Please enter your name here