ಸುಜ್ಞಾನ ಪಿಯು ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ

0
1534

Click Here

Click Here

ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು: ಡಾ. ರಮೇಶ್ ಶೆಟ್ಟಿ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್‌ ಮೀಡಿಯಂ ಸ್ಕೂಲ್‌ನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ವಿದ್ಯಾರಣ್ಯದ ನೂತನ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು.

ಕ್ರೀಡಾಜ್ಯೋತಿ ಬೆಳಗಿದ ಅಧ್ಯಕ್ಷರು
ಕಾರ್ಯಕ್ರಮದಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು ಕ್ರೀಡಾಜ್ಯೋತಿ ಬೆಳಗಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬಳಿಕ ಟೀಚರ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಕಿಶನ್ ರಾಜ್ ಶೆಟ್ಟಿ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮತ್ತು ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ ಅವರು ಕ್ರೀಡಾ ಧ್ವಜಾರೋಹಣ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಗೌರವಪೂರ್ವಕವಾಗಿ ಚಾಲನೆ ನೀಡಿದರು.

Click Here

ಈ ಸಂದರ್ಭದಲ್ಲಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, “ಕ್ರೀಡೆ ಬದುಕಿನಲ್ಲಿ ಶಿಸ್ತು ಮೂಡಿಸುತ್ತದೆ. ಪ್ರತಿಯೊಬ್ಬರೂ ಕ್ರೀಡಾಸ್ಪೂರ್ತಿಯನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯು ದೈಹಿಕ ಹಾಗೂ ಮಾನಸಿಕವಾಗಿ ವ್ಯಕ್ತಿಯನ್ನು ಸದೃಢವಾಗಿಸುತ್ತದೆ. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಗುಣವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸೋಲೇ ಗೆಲುವಿನ ಮೆಟ್ಟಿಲು; ಭರತ್ ಶೆಟ್ಟಿ
ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ” ಕ್ರೀಡೆಯಲ್ಲಿ ಸೋತಾಗ ಕುಗ್ಗದೇ ಅದನ್ನು ಮುಂದಿನ ಗೆಲುವಿಗೆ ಮೆಟ್ಟಿಲು ಎಂದು ತಿಳಿದುಕೊಳ್ಳಬೇಕು. ಕ್ರೀಡೆಯು ನಿಮ್ಮ ಬದುಕಿನಲ್ಲಿ ಶಿಸ್ತು ಮೂಡಿಸಲು ಸಹಕಾರಿಯಾಗಿದ್ದು, ವ್ಯಕ್ತಿತ್ವದ ವಿಕಸನಕ್ಕೆ ಬಹಳ ಮುಖ್ಯವಾಗಿದೆ. ಕ್ರೀಡೆಯನ್ನು ಕೇವಲ ಸ್ಪರ್ಧೆಯಾಗಿ ನೋಡದೆ, ಖುಷಿಯಿಂದ ಅನುಭವಿಸುವ ಗುಣವನ್ನು ಬೆಳೆಸಿಕೊಳ್ಳಿ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರು ವಿಜಯ್‌ ಕುಮಾರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಾಯರಾದ ಪ್ರದೀಪ್‌ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಂದಿಸಿದರು.ಸುಜ್ಞಾನ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ, ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಹಾಗೂ ಕಾವ್ಯ ಶೆಟ್ಟಿ ಸಂಘಟಿಸಿದರು.ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸುಜ್ಞಾನ ಪಿಯು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ಖುಷಿಯಿಂದ ಸ್ಪರ್ಧಿಸಿದರು.

Click Here

LEAVE A REPLY

Please enter your comment!
Please enter your name here