ಕುಂದಾಪುರ ಮಿರರ್ ಸುದ್ದಿ…
ಕಿರಿಮಂಜೇಶ್ವರ: ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಶ್ರಿಯಾ ಕೆ ನೂತನ ಮೈಲಿಗಲ್ಲು ಸಾಧಿಸಿ, ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾಳೆ. ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಪ್ರತಿಷ್ಠಾನದ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಅಭಿಯಾನ ಕರ್ನಾಟಕ, ಇವರು ಈ ಕಂಠಪಾಠ ಸ್ಪರ್ಧೆಯನ್ನು ಆಯೋಜಿಸಿದ್ದರು.
ಈ ಸ್ಪರ್ಧೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದ ವಿದ್ಯಾರ್ಥಿನಿಗೆ ಜನತಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅಭಿನಂದನೆಗಳನ್ನು ಸಲ್ಲಿಸಿದರು. ಜನತಾ ಪದವಿ ಪೂರ್ವ ಕಾಲೇಜು, ಹೆಮ್ಮಾಡಿ ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಶಿಕ್ಷಕ ಶಿಕ್ಷಕಕೇತರ ವೃಂದದವರು ವಿದ್ಯಾರ್ಥಿನಿಯ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.











