ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಜನತಾ ಪಿಯು ಕಾಲೇಜ್ ಹೆಮ್ಮಾಡಿಯಲ್ಲಿ ನಾಳೆ ನವೆಂಬರ್ 22 ಶನಿವಾರ ಕಾಲೇಜಿನಲ್ಲಿ ವ್ಯವಹಾರ ಮೇಳ ಜನತಾ ಆವಿಷ್ಕಾರ್ 2025 ವಿಜ್ಞಾನ, ವ್ಯವಹಾರ, ಸಾಂಸ್ಕೃತಿಕ ಸಂಗಮ ನಡೆಯಲಿದೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜಿನ ಶಿಕ್ಷಣದ ನಡುವೆಯೇ ಸ್ವ ಉದ್ಯೋಗ, ವ್ಯವಹಾರ ಕೌಶಲ್ಯ ಬೆಳೆಸಿಕೊಳ್ಳಬೇಕು. ಕೇವಲ ಅಂಕ ಗಳಿಕೆ ಮಾತ್ರವಲ್ಲದೆ ವ್ಯಾವಹಾರಿಕ ಕೌಶಲ್ಯ, ವ್ಯವಹಾರ ಜ್ಞಾನ ಬೆಳೆಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಸನ್ನದ್ದರಾಗಬೇಕು ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಇವೊಂದು ಅವಕಾಶ ಕಲ್ಪಿಸಿದ್ದೇವೆ.ಈ ವ್ಯವಹಾರ ಮೇಳದಲ್ಲಿ ಸುಮಾರು 100ಹೆಚ್ಚು ಮಳಿಗೆಗಳನ್ನು ವಿದ್ಯಾರ್ಥಿಗಳೆ ನಡೆಸಲಿದ್ದಾರೆ.
ಗಣೇಶ್ ಮೊಗವೀರ, ಪ್ರಾಂಶುಪಾಲರು ಜನತಾ ಪಿಯು ಕಾಲೇಜ್ ಹೆಮ್ಮಾಡಿ
ಇದರ ಜೊತೆಗೆ ಸ್ಥಳೀಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ವೈಯಕ್ತಿಕ ಮತ್ತು ಸಾಮೂಹಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಆಸಕ್ತರು ಈ ವ್ಯವಹಾರ ಮೇಳದಲ್ಲಿ ಭಾಗವಹಿಸಿ ಉತ್ಪನ್ನಗಳನ್ನು ಖರೀದಿಸಬಹುದು ಎಂದು ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಮೊಗವೀರ ತಿಳಿಸಿರುತ್ತಾರೆ.











