ಕುಂದಾಪುರ ಮಿರರ್ ಸುದ್ದಿ…
ಕಿರಿಮಂಜೇಶ್ವರ :ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ ನೆಂಪು ಇವರ ಸಂಯುಕ್ತ ಆಶ್ರಯದಲ್ಲಿ ನವಂಬರ್ 28ರಂದು ನಡೆದ ಬೈಂದೂರು ತಾಲೂಕುಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ‘ಆವಿಷ್ಕಾರ ಅಂಗಳ – 2K25’ ಇದರಲ್ಲಿ ಭಾಗವಹಿಸಿದ ಕಿರಿಮಂಜೇಶ್ವರ ಜನತಾ ಇಂಗ್ಲಿಷ್ ಮೀಡಿಯಂ ಶಾಲೆ ವಿಜ್ಞಾನ ಮಾದರಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ತಾಲೂಕು ಮಟ್ಟದ ಪ್ರಶಸ್ತಿಯನ್ನು ತನ್ನ ತೆಕ್ಕೆಗೇರಿಸಿಕೊಂಡಿದೆ. ಯುವ ವಿಜ್ಞಾನಿಗಳಾದ ಮೊಹಮ್ಮದ್ ಅಶ್ರಫ್ ಒಂಬತ್ತನೇ ತರಗತಿ ಹಾಗೂ ಶ್ರೀಶಾಂತ್ ಒಂಬತ್ತನೇ ತರಗತಿ ಇವರು ತಯಾರಿಸಿದ ಸ್ಮಾರ್ಟ್ ಸಿಟಿ ಎಂಬ ಮಾದರಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕಿ ಕುಮಾರಿ ರಕ್ಷ ಇವರು ಮಾರ್ಗದರ್ಶನವನ್ನು ನೀಡಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದಂತಹ ಶ್ರೀ ಗಣೇಶ ಮೊಗವೀರ ಹಾಗೂ ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಇವರು ಪ್ರಶಂಸಿಸಿದರು.
ಶಾಲೆಯ ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದಿಸಿದರು.











