ಸ್ಪಷ್ಟತೆ ಇದ್ದಾಗ ಗುರಿ ತಲುಪಲು ಸಾಧ್ಯ- ಮಂಜುನಾಥ ಭಂಡಾರಿ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ವಿದ್ಯಾರ್ಥಿಗಳಿಗೆ ಸ್ಪಷ್ಟವಾದ ಗುರಿ ಇರಬೇಕು. ಸ್ಪಷ್ಟತೆ ಇದ್ದಾಗ ಮಾತ್ರ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಶುಕ್ರವಾರ ಹೇಳಿದರು.
ಕುಂದಾಪುರದ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿಪೂರ್ವ ಕಾಲೇಜಿನ ʼಕಂಪ್ಯೂಟರ್ ಲ್ಯಾಬ್ʼ ಉದ್ಘಾಟಿಸಿ ಮಾತನಾಡಿದ ಅವರು, ಅತ್ಯುತ್ತಮ ವಿದ್ಯಾರ್ಥಿಯಾಗಬೇಕು ಎಂಬ ಛಲ ಇಟ್ಟುಕೊಳ್ಳಿ; ನಿಮ್ಮ ತಂದೆ-ತಾಯಿಗೆ ಒಳ್ಳೆಯ ಮಕ್ಕಳಾಗಿ; ಶಾಲೆಗೆ ಕೀರ್ತಿ ತರುವಂಥ ವಿದ್ಯಾರ್ಥಿಗಳಾಗಿ; ಹಾಗೆಯೇ ದೇಶದ ಉತ್ತಮ ಪ್ರಜೆಗಳಾಗಿ ಎಂದು ಕಿವಿಮಾತು ನುಡಿದರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳು ಈ ಕಂಪ್ಯೂಟರ್ ಲ್ಯಾಬ್ ನ ಸದುಪಯೋಗಪಡಿಸಿಕೊಂಡು ಉತ್ತಮವಾದ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಆಶಿಸಿದರು.
ವೇದಿಕೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ,ಟಿ.ಎ.ಪಿ.ಎಂ.ಎಸ್ ನ ಉಪಾಧ್ಯಕ್ಷ ಶರತ್ ಶೆಟ್ಟಿ, ಅಂಪಾರು ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಪ್ರದೀಪ್ ಶೆಟ್ಟಿ, ನಿರಮಯಾ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್, ವಿಎಸ್ ಎಸ್ ಕೊಲ್ಲೂರಿನ ಅಧ್ಯಕ್ಷ ಚಂದ್ರಶೇಖರ ಅಡಿಗ, ಹೊಂಬಾಡಿ-ಮಂಡಾಡಿ ಗ್ರಾ.ಪಂ.ಉಪಾಧ್ಯಕ್ಷ ಬಿ.ಅರುಣ್ ಕುಮಾರ್ ಹೆಗ್ಡೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ ಉಪಸ್ಥಿತರಿದ್ದರು.











