ಕುಂದಾಪುರ ಮಿರರ್ ಸುದ್ದಿ…
ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡದ ಉದ್ಘಾಟನೆ ಸರಳವಾಗಿ ನಡೆಯಿತು.









ನೂತನ ಕಟ್ಟಡ ಉದ್ಘಾಟಿಸಿದ ದ.ಕ ಜಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಯಾವುದೇ ಸೌಲಭ್ಯಗಳು ಇವತ್ತು ನೇರವಾಗಿ ಫಲಾನುಭವಿಯನ್ನು ತಲುಪುವ ಏಕೈಕ ವ್ಯವಸ್ಥೆಯಿದ್ದರೆ ಅದು ಸಹಕಾರ ಕ್ಷೇತ್ರ. ಸೇವಾಧರ್ಮದಿಂದ ಸಹಕಾರ ಕ್ಷೇತ್ರವಿಂದು ಜನರ ಬ್ಯಾಂಕುಗಳಾಗಿ ಪರಿವರ್ತನೆಗೊಂಡಿದೆ. ಗ್ರಾಮೀಣ ಪ್ರದೇಶದ ಕಟ್ಟಕಡೆಯ ಜನರನ್ನೂ ತಲುಪುವ ಕೊಂಡಿಯಾಗಿ, ನೋವು-ನಲಿವುಗಳಲ್ಲಿ ಸ್ಪಂದಿಸುವ ಸ್ವಾತಂತ್ರ್ಯ ಇರುವುದರಿಂದ ಇಂಥಹ ಸಹಕಾರಿ ಸಂಘಗಳು ಜನರ ಜೀವನಾಡಿಯಾಗಿ ಬೆಳೆದಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ, ಜನಸಾಮಾನ್ಯರ ನೋವು ಅರ್ಥ ಮಾಡಿಕೊಳ್ಳುವ ಶಕ್ತಿ ಇರುವುದು ಸಹಕಾರ ಕ್ಷೇತ್ರಕ್ಕೆ ಮಾತ್ರ. ಸಹಕಾರ ಸಂಘಗಳ ಅಧ್ಯಕ್ಷರಿಗೆ ಗೌರವಾಧರದ ಸ್ಥಾನ ಲಭಿಸಿದೆ. ಮೊಳಹಳ್ಳಿ ಶಿವರಾಯ ಸಹಕಾರಿ ರಂಗದ ಪಿತಾಮಹಾ. ಈಗ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಅವಿಭಜಿತ ಜಿಲ್ಲಾ ಸಹಕಾರ ಕ್ಷೇತ್ರ ರಾಷ್ಟ್ರಮಟ್ಟದ ಗಮನ ಸಳೆದಿದೆ ಎಂದರು.
ಮಾಜಿ ಶಾಸಕರು, ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಬೈಂದೂರು ಅಧ್ಯಕ್ಷರಾದ ಕೆ.ಗೋಪಾಲ ಪೂಜಾರಿ ಗೋದಾಮು ಉದ್ಘಾಟಿಸಿದರು. ನಿವೃತ್ತ ಉಪನ್ಯಾಸಕ ಎಸ್.ಜನಾರ್ದನ ಮರವಂತೆ ಶುಭಾಶಂಸನೆಗೈದರು.
ಮುಖ್ಯ ಅತಿಥಿಗಳಾಗಿ ಮರವಂತೆ ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ, ಕುಂದಾಪುರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಮಹೇಶ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ.ಚಂದ್ರಶೀಲ ಶೆಟ್ಟಿ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ನಿರ್ದೇಶಕರುಗಳಾದ ವಾಸು ಪೂಜಾರಿ, ಭೋಜ ನಾಯ್ಕ, ಜಗದೀಶ ಪಿ.ಪೂಜಾರಿ, ನರಸಿಂಹ ದೇವಾಡಿಗ, ರಾಮಕೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ಎಂ.ಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ, ರಾಮ, ಶ್ರೀಮತಿ ನಾಗಮ್ಮ, ಶ್ರೀಮತಿ ಸರೋಜ ಆರ್.ಗಾಣಿಗ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಶಿವರಾಮ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಯಕ್ಷಗಾನದ ಕಿರೀಟ ತೊಡಿಸಿ ಯಕ್ಷಾಭಿನಂದನೆ ಸಲ್ಲಿಸಲಾಯಿತು.
ಮರವಂತೆ ಗ್ರಾಮಕ್ಕೆ ಉತ್ತಮ ಸಹಕಾರಿ ಸಂಘದ ಕಟ್ಟಡ ಒದಗಿಸಿದ ಸಂಘದ ಅಧ್ಯಕ್ಷರಾದ ಎಸ್.ರಾಜು ಪೂಜಾರಿಯವರನ್ನು ಮರವಂತೆ ಗ್ರಾಮಸ್ಥರು ಸನ್ಮಾನಿಸಿದರು.
ಸಂಘದ ವ್ಯಾಪ್ತಿಯಲ್ಲಿ ಕೊರೋನಾದಿಂದ ಮೃತರಾದ 18 ಕುಟುಂಬಗಳಿಗೆ ತಲಾ 10 ಸಾವಿರ ನಗದು ಪರಿಹಾರ ವಿತರಿಸಲಾಯಿತು. ಕ್ಯಾನ್ಸರ್ ಪೀಡಿತರಿಗೆ ಸಂಘದ ವತಿಯಿಂದ ವೈದ್ಯಕೀಯ ನೆರವು ನೀಡಲಾಯಿತು. ಸಂಘದ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಕಾಶವಾಣಿ ಕಲಾವಿದ ಗಣೇಶ ಗಂಗೊಳ್ಳಿ ರೈತಗೀತೆ ಹಾಡಿದರು. ನಾಮ ನಿರ್ದೇಶಿತ ನಿರ್ದೇಶಕ ಎಂ.ವಿನಾಯಕ ರಾವ್ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.











