
ಕುಂದಾಪುರ ಮಿರರ್ ಸುದ್ದಿ…







ಕುಂದಾಪುರ : ಸ್ವಚ್ಛ ಭಾರತ್ ಮಿಷನ್ ಮೂಲಕ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲಾಗಿದ್ದು, ಶಾಲೆಗಳಿಗೆ ಶೌಚಾಲಯಗಳನ್ನು ಬೇರೆ ಬೇರೆ ಯೋಜನೆಗಳ ಮುಖಾಂತರ ನಿರ್ಮಿಸಿಕೊಡಲಾಗುತ್ತಿದೆ. ಪ್ರತಿಯೊಬ್ಬ ನಾಗರಿಕರಿಗೂ ಸ್ವಚ್ಛತೆ ಬಗ್ಗೆ ಅರಿವು ಮೂಡಬೇಕು, ಜನರು ಸ್ವಚ್ಛತೆ ಬಗ್ಗೆ ಕಾಳಜಿ ತೋರಿಸಬೇಕು. ನಮ್ಮ ಪರಿಸರವನ್ನು ನಾವೇ ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಕ್ಕಳಿಗೆ ಮನೆಗಳಲ್ಲಿ ಸ್ವಚ್ಛತೆ ಬಗ್ಗೆ ಹೇಳಿಕೊಡಬೇಕು. ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಬೇಕು. ಮಕ್ಕಳಿಗೆ ಸ್ವಚ್ಛತೆಯ ಅರಿವು ಉಂಟಾದರೆ ಜೀವನದಲ್ಲಿ ಅನುಸರಿಸಲು ಅನುಕೂಲವಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಗೋಪಾಡಿ ಶ್ರೀನಿವಾಸ ರುಕ್ಮಿಣಿ ಪ್ರತಿಷ್ಠಾನದ ವತಿಯಿಂದ ಕೋಟೇಶ್ವರ ವಲಯದ 9 ಗ್ರಾಮಗಳ 24 ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಚಾಲಯ ಸೇವೆ ‘ಸ್ವಚ್ಛ ಭಾರತ ಅಭಿಯಾನದ ರಥಾಲಯ’ಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸರಕಾರಿ ಶಾಲೆ, ಸ್ವಚ್ಛತೆ ಬಗೆಗಿನ ನಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ಸರಕಾರಿ ಶಾಲೆಗಳಿಗೆ, ಶಿಕ್ಷಣಕ್ಕೆ ಆದ್ಯತೆ ನೀಡುತ್ತಾ ಎಳವೆಯಲ್ಲೇ ಸ್ವಚ್ಛತೆಯ ಅರಿವು ಉಂಟಾಗಬೇಕು. ಸರಕಾರಿ ಶಾಲೆಗಳ ಶೌಚಾಲಯ ಶುಚಿಗೊಳಿಸುವ ಮೂಲಕ ಶಾಲೆಗಳಲ್ಲಿ ಸ್ವಚ್ಛತೆಯ ಪಾಠಕ್ಕೆ ಮುಂದಾಗಿರುವ ಗೋಪಾಡಿ ಶ್ರೀನಿವಾಸ ರಾವ್ ಅವರ ಕಾರ್ಯವನ್ನು ನಾವೆಲ್ಲರೂ ನೋಡಿ ಕಲಿಯಬೇಕು. ಸರಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿ ಸಮಾರೋಪಾದಿಯಲ್ಲಿ ಈ ಕಾರ್ಯಕ್ರಮವನ್ನು ನಡೆಸುತ್ತಿರುವ ಗೋಪಾಡಿ ಶ್ರೀನಿವಾಸ ರುಕ್ಮಿಣಿ ಪ್ರತಿಷ್ಠಾನದ ಕಾರ್ಯ ಅಭಿನಂದನೀಯ ಎಂದು ಅವರು ಶ್ಲಾಘಿಸಿದರು.
ಭೀಮನಕಟ್ಟೆ ಬೀಮಸೇತು ಮುನಿವೃಂದ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಸಾಮಾಜಿಕ ಕಾರ್ಯಕರ್ತ ಬಿ.ಶ್ರೀಪತಿ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕುಂದಾಪುರದ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್., ಮಣೂರು ಪಡುಕೆರೆ ಗೀತಾನಂದ ಫೌಂಡೇಶನ್‍ನ ಪ್ರವರ್ತಕ ಆನಂದ ಸಿ.ಕುಂದರ್ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಉಪನ್ಯಾಸಕ ಎಚ್.ಬಿ.ಮಂಜುನಾಥ್ ಶುಭಾಂಶನೆಗೈದರು. ಉಡುಪಿ ಜಿಲ್ಲೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ (ಆಡಳಿತ) ಲೋಕೇಶ ಸಿ., ಉಡುಪಿ ಜಿಲ್ಲೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ (ಅಭಿವೃದ್ಧಿ) ಅಶೋಕ ಕಾಮತ್, ಕರ್ನಾಟಕ ಸಮಾಜ ಸೇವಕ ಎಚ್.ರಾಮಚಂದ್ರ ವರ್ಣ, ಗೋಪಾಡಿ ಶ್ರೀನಿವಾಸ ರುಕ್ಮಿಣಿ ಪ್ರತಿಷ್ಠಾನದ ಸಂಸ್ಥಾಪಕ ಗೋಪಾಡಿ ರುಕ್ಮಿಣಿ ರಾವ್, ಅಧ್ಯಕ್ಷ ಗೋಪಾಡಿ ಸಂತೋಷ, ಕಾರ್ಯದರ್ಶಿ ಅಮೃತ್ ಕುಮಾರ್ ತೌಳ, ಖಜಾಂಚಿ ಮಹೇಶ ಹತ್ವಾರ್, ಗೋಪಾಡಿ ಶ್ರೀನಿವಾಸ ರುಕ್ಮಿಣಿ ಪ್ರತಿಷ್ಠಾನದ ಟ್ರಸ್ಟಿಗಳು ಮೊದಲಾದವರು ಉಪಸ್ಥಿತರಿದ್ದರು.
ಗೋಪಾಡಿ ಶ್ರೀನಿವಾಸ ರುಕ್ಮಿಣಿ ಪ್ರತಿಷ್ಠಾನದ ಟ್ರಸ್ಟಿ ಸುಹಾಸ್ ಉಪಾಧ್ಯಾಯ ಕೆ.ಎಸ್. ಸ್ವಾಗತಿಸಿದರು. ಗೋಪಾಡಿ ಶ್ರೀನಿವಾಸ ರುಕ್ಮಿಣಿ ಪ್ರತಿಷ್ಠಾನದ ಸಂಸ್ಥಾಪಕ ಗೋಪಾಡಿ ಶ್ರೀನಿವಾಸ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.










