ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕೆರೆ ಪುಂಡಣ್ಣನ ಹೊಟೇಲ್ ಸಮೀಪ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಾರಂಪಳ್ಳಿ ಪಡುಕೆರೆಯ ದರ್ಶನ್(21), ಸಾಸ್ತಾನ ಪಾಂಡೇಶ್ವರದ ನೀರಾಡಿ ಜೆಡ್ಡುವಿನ ಕೌಶಿಕ್(21), ಕೋಟತಟ್ಟುವಿನ ಪಡುಕೆರೆಯ ಅಂಕಿತ್(19) ಮತ್ತು ಸುಜನ್(21) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಗಿದೆ.
ಡಿ.14ರಂದು ರಾತ್ರಿ ವೇಳೆ ಸಂತೋಷ್ ಮೊಗವೀರ, ಸಚಿನ್, ಚೇತನ್, ಕೌಶಿಕ್, ಸುಜನ್ ಮತ್ತು ದರ್ಶನ್ ಬಾರ್‍ನಲ್ಲಿ ಪಾರ್ಟಿ ಮುಗಿಸಿ ಪಡುಕೆರೆಯ ಪುಂಡಣ್ಣನ ಹೊಟೇಲ್ ಸಮೀಪ ಬಂದು ಅಲ್ಲಿ ಊಟ ಮಾಡಿಕೊಂಡು ಮಾತನಾಡುತ್ತಿದ್ದರು. ದರ್ಶನ್ ಮತ್ತು ಕೌಶಿಕ್, ಅಂಕಿತ ಹಾಗೂ ಸುಜನ್, ಸಂತೋಷ್ ಅವರ ಕುಟುಂಬದ ವಿಚಾರದಲ್ಲಿ ಮತ್ತು ಮದ್ಯಪಾನದ ವಿಚಾರದಲ್ಲಿ ವಾಗ್ವಾದ ಆಗಿ ಅವಾಚ್ಯ ಶಬ್ದಗಳಿಂದ ಬೈದು, ಸಂತೋಷನಿಗೆ ನಾಲ್ಕು ಜನರು ಸೇರಿ ಹಲ್ಲೆ ನಡೆಸಿದರೆನ್ನಲಾಗಿದೆ.
ಹೊಡೆದಾಟದ ವೇಳೆ ದರ್ಶನ್, ಸಂತೋಪ್ ಕುತ್ತಿಗೆ ಹಿಂಬದಿಗೆ ದರ್ಶನ್ ಕೈಯಿಂದ ಬಲವಾಗಿ ಹೊಡೆದಿದ್ದಾನೆ. ಕೌಶಿಕ್ ಕೂಡಾ ಕೈಯಿಂದ ಹೊಡೆದ್ದಿದ್ದಾನೆ. ರಜತ್ ಇವರ ಜಗಳವನ್ನು ನಿಲ್ಲಿಸಿದ್ದಾರೆ. ಆದರೆ ಅಷ್ಟರಲ್ಲಿ ಹಲ್ಲೆಗಳೊಗಾದ ಸಂತೋಷ್ ಅಲ್ಲಿಯೇ ಕುಸಿದು ಬಿದ್ದರೆಂದು ತಿಳಿದುಬಂದಿದೆ.
ಬಳಿಕ ಸಂತೋಷನನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಸಂತೋಷ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಸರ್ಕಲ್, ಎಸ್ ಪಿ ಭೇಟಿ
ಘಟನೆಗೆ ಸಂಬಂಧಿಸಿದಂತೆ ಕೋಟ ಠಾಣಾಧಿಕಾರಿ ಪ್ರವೀಣ್ ನಾಯಕ್ ರಾತ್ರಿಯೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಘಟನೆಯ ಬೆಳಿಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡಿದ್ದು ಈ ಸಂಬಂಧ ಬೆಳಿಗ್ಗೆ ಬ್ರಹ್ಮಾವರ ಸರ್ಕಲ್ ಗೋಪಿಕೃಷ್ಣ ಭೇಟಿ ಸೋಮವಾರ ನೀಡಿ ಸ್ಥಳ ಪರಿಶೀಲಿಸಿದರು.
ಅಪರಾಹ್ನ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕೋಟತಟ್ಟು ಪಡುಕರೆಯ ಪುಂಡಣ್ಣನ ಹೋಟೆಲ್ ಹತ್ತಿರ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಇನ್ನಷ್ಟು ಸಾಕ್ಷಾಧಾರಗಳನ್ನು ಕಲೆಹಾಕುವ ಸಂಬಂಧ ತಮ್ಮ ಇಲಾಖೆಯೊಂದಿಗೆ ಮಾತುಕತೆ ನಡೆಸಿದ್ದಾರೆ.











