ಕುಂದಾಪುರ ಮಿರರ್ ಸುದ್ದಿ…
ಕೋಟ: ಕಳೆದ 19 ವರ್ಷಗಳಿಂದ ಕೋಟ ಸಹಕಾರಿ ವ್ಯವಸಾಯಕ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ ತಮ್ಮ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಹಿರಿಯ ಸಹಾಯಕಿ ಲೀಲಾವತಿ ಡಿ.31 ರಂದು ಸೇವಾ ನಿವೃತ್ತಿ ಹೊಂದಿದರು.
ಅದರಂತೆ ಜ.4 ರಂದು ಸಂಘದ ಪ್ರಧಾನ ಕಛೇರಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಅಧ್ಯಕ್ಷತೆಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ ಜಿ. ರಾಜೀವ ದೇವಾಡಿಗ, ನಿರ್ದೇಶಕರಾದ ಡಾ. ಕೃಷ್ಣ ಕಾಂಚನ್, ರವೀಂದ್ರ ಕಾಮತ್, ಪ್ರೇಮಾ ಪೂಜಾರಿ, ಕುಮಾರಿ ರಶ್ಮಿತಾ, ವಸಂತ ಶೆಟ್ಟಿ, ಗುಲಾಬಿ ಉಪಸ್ಥಿತರಿದ್ದರು.
ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಇವರು ನಿವೃತ್ತರ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಂಘದ ನಿವೃತ್ತ ಮತ್ತು ಹಾಲಿ ಸಿಬ್ಬಂದಿಯವರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತಕುಮಾರ್ ಶೆಟ್ಟಿ ಇವರು ಗಣ್ಯರನ್ನು ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು.











