ಆನೆಗುಡ್ಡೆ ಶ್ರೀ ವಿನಾಯಕ ದೇವರ ಸನ್ನಿದಾನದಲ್ಲಿ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಗೆ ಪೂಜೆ

0
289

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮುಂದಿನ ಉಡುಪಿ ಶ್ರೀ ಕೃಷ್ಣ ಪೂಜಾ ಕೈಂಕರ್ಯ ಕೈಗೊಳ್ಳುತ್ತಿರುವ ಪೂರ್ವಭಾವಿ ಧಾರ್ಮಿಕ ಸಂಚಾರದಲ್ಲಿರುವ, ಪ್ರಥಮ ಪರ್ಯಾಯ ಪೀಠವನ್ನೇರಲಿರುವ ಶ್ರೀ ಶಿರೂರು ಮಠದ ಶ್ರೀ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರ ಪರ್ಯಾಯ ಆಮಂತ್ರಣ ಪತ್ರಿಕೆಯನ್ನು ವಿತರಣೆಗೊಳಿಸುವ ಮೊದಲು ಆನೆಗುಡ್ಡೆ ಶ್ರೀ ವಿನಾಯಕ ದೇವರ ಸನ್ನಿದಾನಕ್ಕೆ ಸಮರ್ಪಿಸಿ, ಪ್ರಾರ್ಥನೆ ಸಲ್ಲಿಸುವ ಮೂಲಕ ವಿತರಣೆಗೆ ಚಾಲನೆ ನೀಡಲಾಯಿತು.

Click Here

ಈ ಸಂದರ್ಭದಲ್ಲಿ ಪರ್ಯಾಯ ಮಹೋತ್ಸವದ ಜಿಲ್ಲಾ ಪ್ರಧಾನ ಸಂಚಾಲಕರಾದ ಬೈಕಾಡಿ ಸುಪ್ರಸಾದ ಶೆಟ್ಟಿ, ತಾಲೂಕು ಸಂಚಾಲಕ ರಾಜೇಶ್ ಕಾವೇರಿ, ಕುಂದಾಪುರ ಬಿಜಿಪಿ ಮಂಡಲ ಇದರ ಅಧ್ಯಕ್ಷ ಸುರೇಶ ಶೆಟ್ಟಿ ಗೋಪಾಡಿ, ಸಹ ಸಂಚಾಲಕರಾದ ಪುರಂದರ ಶೆಟ್ಟಿ ತೆಕ್ಕಟ್ಟೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಉಮೇಶ ಶೆಟ್ಟಿ ಹಾಗೂ ದೇವಳದ ವ್ಯವಸ್ಥಾಪಕ ನಟೇಶ್ ಕಾರಂತ್ ಅರ್ಚಕ ಹಾಗೂ ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು .

Click Here

LEAVE A REPLY

Please enter your comment!
Please enter your name here