ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕೋಟೇಶ್ವರ ಪಂಚಾಯತ್ ಗೆ ಸೇರಿರುವ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಘಟಕಕ್ಕೆ ಅಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಹಾನಿಯಾಗಿರುವ ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಸ್ಥಳಕ್ಕೆ ಭೇಟಿ ನೀಡಿ. ಪರಿಶೀಲನೆ ನಡೆಸಿ, ಬೆಂಕಿಗೆ ಆಹುತಿಯಾದ ಕೆಲವೊಂದು ಅಂಗಡಿ ಮಾಲೀಕರಿಗೆ ಶಾಸಕರು ಸಾಂತ್ವನ ಹೇಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತಾಗಿ ಪರಿಹಾರ ಒದಗಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೋಟೇಶ್ವರ ಗ್ರಾಮ ಪಂಚಾಯಿತಿನ ಪಿಡಿಒ ದಿನೇಶ್, ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷ ಕೃಷ್ಣ ಗೊಲ್ಲ , ಪ್ರಮುಖರಾದ ಶಂಕರ ಅಂಕದಕಟ್ಟೆ, ಸುರೇಂದ್ರ ಮಾರ್ಕೋಡ, ಕೋಟೇಶ್ವರ ಗ್ರಾಮ ಪಂಚಾಯಿತಿನ ಸದಸ್ಯರು ಮತ್ತು ಗ್ರಾಮ ಪಂಚಾಯತಿನ ಅಧಿಕಾರಿಯ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು.











