ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಖಾಸಗಿ ಕಾರ್ಯಕ್ರಮ ನಿಮಿತ್ತ ಕುಂದಾಪುರಕ್ಕೆ ಆಗಮಿಸಿದ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಮತ್ತು ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಅವರು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕರು ಪುಷ್ಪವನ್ನು ನೀಡಿ ಸ್ವಾಗತಿಸಿಕೊಂಡರು.
ಈ ಸಂದರ್ಭದಲ್ಲಿ ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸುಧೀರ್.ಕೆ.ಎಸ್., ಪುರಸಭಾ ಮಾಜಿ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಪುರಸಭಾ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್ ವಿ., ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಭಾಸ್ಕರ್ ಬಿಲ್ಲವ, ಕೋಟೇಶ್ವರ ಗ್ರಾಮ ಪಂಚಾಯಿತ್ ನ ನಿಕಟ ಪೂರ್ವ ಅಧ್ಯಕ್ಷ ಕೃಷ್ಣ ಗೊಲ್ಲ, ಪಕ್ಷದ ಮುಖಂಡರಾದ ಕೆದೂರು ಸಂಪತ್ ಶೆಟ್ಟಿ, ರಾಜೇಶ್ ಕಾವೇರಿ, ಮಾಜಿಪುರಸಭಾ ಸದಸ್ಯರಾದ ಸತೀಶ್ ಶೆಟ್ಟಿ, ದಿವಾಕರ ಕಡ್ಗಿ ಹಾಗೂ ರಾಘವೇಂದ್ರ ಖಾರ್ವಿ, ವಿನೋದ್ ದೇವಾಡಿಗ ಮತ್ತು ಗ್ರಾಮ ಪಂಚಾಯಿತಿನ ಸದಸ್ಯರು, ಪಕ್ಷದ ಪದಾಧಿಕಾರಿಯವರು ಉಪಸ್ಥಿತರಿದ್ದರು.











