ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ನೇತಾಜಿ ಸರಕಾರಿ ಪ್ರೌಢಶಾಲೆ ಕಾಳಾವರದಲ್ಲಿ 2025 -26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಅದ್ದೂರಿಯಾಗಿ ಜರುಗಿತು .
ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕಾಳಾವರ ಗ್ರಾಮ ಪಂಚಾಯತ್ ಸದಸ್ಯರಾದ ಜಯಪ್ರಕಾಶ್ ಶೆಟ್ಟಿಯವರು ಆಕರ್ಷಕ ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿ, ಕ್ರೀಡೆಯಿಂದ ಶಿಸ್ತನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.
ಕಾಳಾವರದ ಉದ್ಯಮಿಗಳಾದ ಭರತ್ ಕುಮಾರ್ ಶೆಟ್ಟಿಯವರು ಕ್ರೀಡಾ ಜ್ಯೋತಿ ಬೆಳಗಿಸಿ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯಿಂದ ಸೋಲು ಗೆಲುವೆನ್ನದೆ ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.
ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸತೀಶ ಜೋಗಿಯವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಎಲ್ಲಾ ಕ್ರೀಡಾಳುಗಳಿಗೆ ಶುಭ ಹಾರೈಸಿದರು.
ಅತಿಥಿಗಳಾದ ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಹಾಗೂ ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವೆಂಕಟ್ ಇವರು ಬಲೂನ್ ಮತ್ತು ಪಾರಿವಾಳವನ್ನು ಹಾರಿ ಬಿಡುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಮುಖ್ಯೋಪಾಧ್ಯಾಯರಾದ ಮುಸರತ್ ಜಹಾನ್ ಅಕ್ಬರ್ ಎಂ .ಇವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕ್ರೀಡಾ ಮಂತ್ರಿ ಸುಮಂತ್ ಎಲ್ಲ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕನ್ನಡ ಅಧ್ಯಾಪಕರಾದ ರವಿರಾಜ್ ಶೆಟ್ಟಿ ಯವರು ನಿರೂಪಿಸಿದರು. ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ರಾಮ್ ರವರು ವಂದನಾರ್ಪಣೆಗೈದರು. ತದನಂತರ ನೇತಾಜಿ ,ನೆಹರು ಕಾವೇರಿ, ಗೋದಾವರಿ ಹೌಸ್ ಗಳ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.












