ಬೆಂಗಳೂರು :ವಾರಾಹಿ ಏತ ನೀರಾವರಿ ಯೋಜನೆ ಸಿ.ಎಂ ಮತ್ತು ಡಿಸಿಎಂ ಭೇಟಿಯಾದ ಕೆ.ಗೋಪಾಲ ಪೂಜಾರಿ.

0
1557

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರಸ್ತುತ ಗೊಂದಲ ಬಗೆಹರಿಸಲು ಒತ್ತಾಯಿಸಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ, ಮನವಿ ಸಲ್ಲಿಸಿದ್ದಾರೆ.

ಪ್ರಸ್ತುತ ನಡೆಸಲು ಉದ್ದೇಶಿಸಿರುವ ಸ್ಥಳದಲ್ಲಿ ಕಾಮಗಾರಿ ಮುಂದುವರೆಸುವುದರಿಂದ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟ ಅವರು, ತಾಂತ್ರಿಕ ತಜ್ಞರ ಅಭಿಪ್ರಾಯ ಪಡೆದುಕೊಂಡು ಈಗಾಗಲೇ ಸೂಚಿತವಾಗಿರುವ ಪ್ರದೇಶಗಳಿಗೆ ನಿರೂಣಿಸಲು, ಆದ್ಯತೆಯ ನೆಲೆಯಲ್ಲಿ ಏತ ನೀರಾವರಿ ಯೋಜನೆಯನ್ನು ಪರಿಗಣಿಸುವಂತೆ ಮನವಿ ಮಾಡಿದರು.

Click Here

ಮಾಜಿ ಶಾಸಕರ ಮನವಿಗೆ ಸಿಎಂ ಹಾಗೂ ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಶೀಘ್ರದಲ್ಲೇ ವಾರಾಹಿ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಆಡಳಿತ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಹರೀಶ್ ತೋಳಾರ್ ಹಾಗೂ ಇತರ ಅಧಿಕಾರಿಗಳು ಇದ್ದರು.

Click Here

LEAVE A REPLY

Please enter your comment!
Please enter your name here