ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ :ಕಾಳಾವರದ ನೇತಾಜಿ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಳಾವರ ಗ್ರಾಮ ಪಂಚಾಯತ್ ನ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ಯವರು ಉಪಸ್ಥಿತರಿದ್ದು ಪಠ್ಯದ ಜೊತೆಗೆ ಪಠ್ಯಪೂರಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಕಾಳಾವರದ ಉದ್ಯಮಿಗಳು ಹಾಗೂ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಭರತ್ ಕುಮಾರ್ ಶೆಟ್ಟಿ ಯವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಕ್ರೀಡೆಯಲ್ಲಿ ವಿಭಾಗ ಮಟ್ಟದವರೆಗಿನ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದರು.
ನಿವೃತ್ತ ಮುಖ್ಯ ಶಿಕ್ಷಕರಾದ ಗಾಯತ್ರಿ ಅಡಿಗ ಅವರು ಬಹುಮಾನ ವಿತರಿಸಿ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಮುಂಬರುವ ಪರೀಕ್ಷೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಕರೆ ನೀಡಿದರು.
ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಿಂಚನಾಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಸತೀಶ್ ಜೋಗಿ ಯವರು ವಹಿಸಿದ್ದರು.ಬಳಿಕ ಮಾತನಾಡಿ ಈ ಬಾರಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ,ಎಸ್ ಡಿ ಎಂ ಸಿ ಸದಸ್ಯರಾದ ವಿಕ್ರಮ್ ಶೆಟ್ಟಿ, ನಿವೃತ್ತ ಹಿಂದಿ ಶಿಕ್ಷಕರಾದ ಅತ್ಮಾರಾಮ್ ಎಸ್ ಗುನಗಾ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಗಣೇಶ್ ಶೆಟ್ಟಿಗಾರ್ ಇವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಮುಸರತ್ ಜಹಾನ್ ಅಕ್ಬರ್ ಎಂ. ಅವರು 2025- 26ನೇ ಸಾಲಿನ ಶಾಲಾ ವರದಿ ವಾಚಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀರಾಮ ಕೆ ಹಾಗೂ ಆಂಗ್ಲ ಭಾಷಾ ಶಿಕ್ಷಕರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ನೋಡಲ್ ಶಿಕ್ಷಕರು ಹೇಮಾ ಕ್ರೀಡಾ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನಿತರ ಪಟ್ಟಿಯನ್ನು ವಾಚಿಸಿದರು . ಕನ್ನಡ ಅಧ್ಯಾಪಕರಾದ ರವಿರಾಜ್ ಶೆಟ್ಟಿ ಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಮಾಜ ವಿಜ್ಞಾನ ಶಿಕ್ಷಕರಾದ ಶ್ರೀಲತಾ ರವರು ಧನ್ಯವಾದ ಸಮರ್ಪಿಸಿದರು.
ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ, ನಾಟಕ ವಿವಿಧ ವಿನೋದಾವಳಿಗಳು ಜರುಗಿದವು.











